ಕಾರವಾರ: ಕಟ್ಟಡ ನಿರ್ಮಾಣಗೊಂಡರೂ ಉದ್ಘಾಟನೆ ಭಾಗ್ಯ ಕಾಣದ ಇಂದಿರಾ ಕ್ಯಾಂಟೀನ್ ಗೆ ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್ ಕೆ. ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಗರದ ಕೆಇಬಿ ಬಳಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಾಮಗಾರಿ ತಿಂಗಳ ಹಿಂದೆಯೇ ಬಹುತೇಕ ಮುಕ್ತಾಯಗೊಂಡಿದೆ. ಆದರೂ ಉದ್ಘಾಟನೆ ಭಾಗ್ಯ ಕಂಡಿರಲಿಲ್ಲ. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಈ ರೀತಿ ವಿಳಂಬ ಆಗುತ್ತಿರುವುದಕ್ಕೆ ಸಾರ್ವಜನಿಕರಿಂದ ಅಸಮಾಧಾನ ವ್ಯಕ್ತವಾಗಿತ್ತು. ಈ ಎಲ್ಲಾ ಕಾರಣದಿಂದಾಗಿ ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿಯವರು ನಗರಸಭೆ ಅಧಿಕಾರಿಗಳಿಂದ ಮಾಹಿತಿ ಪಡೆದರು.