ಕಾರವಾರ: ಗೌರಿ ಗಣೇಶ ಹಬ್ಬಕ್ಕೆ ಇನ್ನೊಂದು ದಿನ ಮಾತ್ರ ಬಾಕಿ ಉಳಿದಿವೆ. ಕಳೆದೆರಡು ವರ್ಷಗಳಿಂದ ಕೊರೊನಾ ಕಾರಣಕ್ಕೆ ಕಳೆಗುಂದಿದ್ದ ಗಣೇಶ ಚತುರ್ಥಿ ಈ ಬಾರಿ ರಂಗು ಪಡೆದುಕೊಂಡಿದೆ. ಅದರಲ್ಲೂ ಕರಾವಳಿ ನಗರಿ ಕಾರವಾರದಲ್ಲಿ ವಿಜೃಂಭಣೆಯ ಆಚರಣೆಗೆ ಜನರು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಮೂರ್ತಿ ತಯಾರಕರು ಸಹ ಉತ್ಸಾಹದಿಂದಲೇ ಗಣೇಶನ ತರಹೇವಾರಿ ಅವತಾರಗಳನ್ನು ಸಿದ್ಧಪಡಿಸುವಲ್ಲಿ ನಿರತರಾಗಿದ್ದಾರೆ.
ಕಾರವಾರದಲ್ಲಿ ಪ್ರತಿ ವರ್ಷ ಗಣೇಶ ಚತುರ್ಥಿಯನ್ನು ಜನರು ಮನೆಗಳಲ್ಲಿ ಆಚರಿಸುವುದರ ಜೊತೆಗೆ ಎಲ್ಲರೂ ಒಟ್ಟಾಗಿ ಸಾರ್ವಜನಿಕವಾಗಿ ಮೂರ್ತಿಗಳನ್ನ ಕೂರಿಸುತ್ತಾರೆ. 9 ರಿಂದ 11 ದಿನಗಳ ಕಾಲ ನಗರದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗುವುದರ ಜೊತೆಗೆ ಮೂರ್ತಿ ವಿಸರ್ಜನಾ ಕಾರ್ಯಕ್ರಮ ಸಹ ವಿಜೃಂಭಣೆಯಿಂದ ಜರುಗುತ್ತದೆ.
ಎರಡು ವರ್ಷ ಮಂಕಾಗಿದ್ದ ಹಬ್ಬದ ಆಚರಣೆ.. ಕಳೆದೆರಡು ವರ್ಷ ಕೊರೊನಾ ಹಿನ್ನೆಲೆ ಸರ್ಕಾರ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದ್ದರಿಂದ ಸರಳವಾಗಿ ಸಾರ್ವಜನಿಕ ಗಣೇಶೋತ್ಸವ ಆಚರಣೆ ಮಾಡಲಾಗಿತ್ತು. ಈ ಬಾರಿ ಕೊರೊನಾ ಆತಂಕ ಇಲ್ಲವಾಗಿದ್ದು, ಸರ್ಕಾರ ಸಹ ಅವಕಾಶ ನೀಡಿರುವ ಹಿನ್ನೆಲೆ ಜನರು ಸಾರ್ವಜನಿಕ ಗಣೇಶೋತ್ಸವವನ್ನು ವಿಜೃಂಭಣೆಯಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈಗಾಗಲೇ ನಗರದಲ್ಲಿ ಪೆಂಡಾಲ್ ಹಾಕಿ ತಯಾರಿ ಮಾಡಿಕೊಳ್ಳಲಾಗುತ್ತಿದ್ದು, ಹಿಂದಿಗಿಂತಲೂ ದೊಡ್ಡದಾದ ಮೂರ್ತಿ ಪ್ರತಿಷ್ಠಾಪಿಸಲಾಗುತ್ತಿದೆ ಅಂತಾರೆ ಗಣೇಶೋತ್ಸವ ಸಮಿತಿ ಮುಖಂಡರು.
ಇದನ್ನೂ ಓದಿ:ಪರಿಸರ ಸ್ನೇಹಿ ಗಣಪತಿ ತಯಾರು ಮಾಡುವ ಹಾವೇರಿಯ ನೆಗಳೂರುಮಠ ಕುಟುಂಬ