ಶಿರಸಿ : ಕಾಡಿನಲ್ಲಿ ಅಪರಿಚಿತ ವ್ಯಕ್ತಿಯೊರ್ವನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಉತ್ತರ ಕನ್ನಡದ ಶಿರಸಿಯ ಕೆರೆಕೈ ಬಳಿ ನಡೆದಿದೆ.
ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ... ಕೊಲೆ ಶಂಕೆ! - kannada news
ತಾಲೂಕಿನ ಕೆರೆಕೈ ಗಣಪತಿ ದೇವಸ್ಥಾನದ ಬಳಿಯಿರುವ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.
ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ತಾಲೂಕಿನ ಕೆರೆಕೈ ಗಣಪತಿ ದೇವಸ್ಥಾನದ ಬಳಿಯಿರುವ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ವ್ಯಕ್ತಿ ಸಾವನ್ನಪ್ಪಿ ಎರಡು ದಿನ ಕಳೆದಿರಬಹುದೆಂದು ಅಂದಾಜಿಸಲಾಗಿದೆ. ಮೃತ ವ್ಯಕ್ತಿಯ ಮೈಮೇಲೆ ಗಾಯದ ಗುರುತುಗಳಾಗಿದ್ದು, ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಲಾಗಿದೆ.
ಕಾಡಿನಲ್ಲಿ ಗಬ್ಬು ನಾರುತ್ತಿದ್ದ ದೇಹ ಸ್ಥಳೀಯರ ಕಣ್ಣಿಗೆ ಬಿದ್ದಿದ್ದು, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.