ಕಾರವಾರ: ಗರ್ಭಿಣಿ ಹಸುವಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಮಟಾ ಬಸ್ ನಿಲ್ದಾಣದಲ್ಲಿ ನಡೆದಿದೆ.
ಹುನಗುಂದದಿಂದ ಪುತ್ತೂರು ಮಾರ್ಗವಾಗಿ ಚಲಿಸುತ್ತಿದ್ದ ಬಸ್ ತಡರಾತ್ರಿ ನಿಲ್ದಾಣದಲ್ಲಿ ನಿಂತ ಆಕಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಹಸು ಹಾಗೂ ಅದರ ಹೊಟ್ಟೆಯಲ್ಲಿದ್ದ ಕರು ಸ್ಥಳದಲ್ಲೇ ಮೃತಪಟ್ಟಿದೆ.