ಕಾರವಾರ: ದೇವಾಲಯದ ಬಾಗಿಲು ಮುರಿದು ದೇವರ ಕವಚ ಸೇರಿದಂತೆ 10 ಲಕ್ಷಕ್ಕೂ ಅಧಿಕ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಕುಮಟಾ ತಾಲೂಕಿನ ಮೂರೂರಿನಲ್ಲಿ ತಡರಾತ್ರಿ ನಡೆದಿದೆ.
ವಿಷ್ಣು ದೇವಾಲಯಕ್ಕೆ ಕನ್ನ: ದೇವರ ಕವಚ ಸೇರಿ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ - ವಿಷ್ಣು ದೇವಾಲಯ ಕಳ್ಳತನ ನ್ಯೂಸ್
ಮೂರೂರಿನ ಕೋಣಾರೆಯ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ತಡರಾತ್ರಿ ಬಾಗಿಲ ಬೀಗ ಮುರಿದು ಒಳ ನುಗ್ಗಿದ ಕಳ್ಳರು, ದೇವರ ಕವಚ ಸೇರಿ ಸುಮಾರು 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿ ಪರಾರಿಯಾಗಿದ್ದಾರೆ.
Temple
ಮೂರೂರಿನ ಕೋಣಾರೆಯ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ತಡರಾತ್ರಿ ಬಾಗಿಲ ಬೀಗ ಮುರಿದು ಒಳ ನುಗ್ಗಿದ ಕಳ್ಳರು, ದೇವರ ಕವಚ ಸೇರಿ ಸುಮಾರು 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದಾರೆ. ದೇವಸ್ಥಾನದಿಂದ ಶಬ್ದ ಬಂದ ಹಿನ್ನೆಲೆಯಲ್ಲಿ ಅರ್ಚಕರು ಎದ್ದು ನೋಡಿದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.
ಇನ್ನು ಕಳ್ಳರು ಪರಾರಿಯಾಗಿದ್ದು, ಈ ಬಗ್ಗೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.