ಕಾರವಾರ: ಕಳೆದ ಬಾರಿ ಸುರಿದ ಭಾರಿ ಮಳೆಗೆ ಬಿರುಕು ಬಿಟ್ಟಿದ್ದ ಭೂಮಿ ಇಂದು ದಿಢೀರ್ ಕುಸಿದು ಅಡಿಕೆ ತೋಟಕ್ಕೆ ಹಾನಿಯಾಗಿರುವ ಘಟನೆ ಶಿರಸಿ ತಾಲೂಕಿನ ಮತ್ತಿಘಟ್ಟ ಗ್ರಾಮದಲ್ಲಿ ನಡೆದಿದೆ.
ಮತ್ತಿಘಟ್ಟದ ಕೆಳಗಿನ ಕೇರಿಯ ಮಧುಸೂದನ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ಭೂ ಕುಸಿತ ಸಂಭವಿಸಿದೆ. ಘಟನೆಯಲ್ಲಿ ಸುಮಾರು ಒಂದು ಎಕರೆ ಅಡಿಕೆ ತೋಟಕ್ಕೆ ಹಾನಿಯಾಗಿದ್ದು, 20 ಲಕ್ಷಕ್ಕೂ ಹೆಚ್ಚು ಹಾನಿಯಾಗಿದೆ ಎನ್ನಲಾಗಿದೆ.