ಶಿರಸಿ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿಯ 753 ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗೂ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸರ್ಕಾರದ ಶೈಕ್ಷಣಿಕ ಅಭಿವೃದ್ಧಿ ಯೋಜನೆಯಡಿಯಲ್ಲಿ ಉಚಿತ ಲ್ಯಾಪ್ ಟ್ಯಾಪ್ ವಿತರಣೆ ಮಾಡಿದರು.
ಶಿರಸಿ ಪ್ರಥಮ ದರ್ಜೆ ಕಾಲೇಜಿನ 753 ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿಯ 753 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅಭಿವೃದ್ಧಿ ಯೋಜನೆಯಡಿಯಲ್ಲಿ ಉಚಿತ ಲ್ಯಾಪ್ ಟ್ಯಾಪ್ ವಿತರಣೆ ಮಾಡಲಾಯಿತು.
ಬುಧವಾರ ಬನವಾಸಿ ರಸ್ತೆಯಲ್ಲಿರುವ ಸರ್ಕಾರಿ ಕಾಲೇಜಿನ ನೂತನ ಕಟ್ಟಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ 1,150 ವಿದ್ಯಾರ್ಥಿಗಳ ಪೈಕಿ 783 ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಿಸಿದರು.
ಲ್ಯಾಪ್ಟ್ಯಾಪ್ ವಿತರಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಸರ್ಕಾರಿ ಸುತ್ತೋಲೆ ಕಾರ್ಯಕ್ರಮವಾಗದೆ ಕ್ರಿಯಾಶೀಲವಾಗಿ ನಡೆಯಬೇಕು. ಕಾಲೇಜಿನ ಪ್ರಾಚಾರ್ಯರು ಹಾಗೂ ಉಪನ್ಯಾಸಕರ ನಡುವೆ ಹೊಂದಾಣಿಕೆಯಿಲ್ಲ. ಇಲ್ಲಿ ಕೆಲಸ ಮಾಡಲು ಆಸಕ್ತಿ ಇಲ್ಲದಿದ್ದರೆ ಹೋಗಿ. ಸರಿಪಡಿಸಿಕೊಳ್ಳದಿದ್ದರೆ ನಾನೇ ಕಳುಹಿಸುತ್ತೇನೆ. ನಿಮ್ಮ ನಡುವಿನ ಒಳಜಗಳ ವಿದ್ಯಾರ್ಥಿಗಳ ಮೇಲೆ ದುಷ್ಪರಿಣಾಮ ಬೀರಬಾರದು. ಸರ್ಕಾರದಿಂದ ಈವರೆಗೆ ಸುಮಾರು 12 ಕೋಟಿ ಬಿಡುಗಡೆಯಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಸರ್ಕಾರ ಉಚಿತವಾಗಿ ಲ್ಯಾಪ್ಟ್ಯಾಪ್ ನೀಡುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಎಂದರು.