ಕರ್ನಾಟಕ

karnataka

ETV Bharat / state

ಅಕ್ರಮ ಮರಳುಗಾರಿಕೆ ನಡೆಸಿದ್ರೇ ಕಾನೂನು ಕ್ರಮ.. ಉತ್ತರಕನ್ನಡ ಜಿಲ್ಲಾಧಿಕಾರಿ ಎಚ್ಚರಿಕೆ - Karawara latest news

ಸೆ.21ರಿಂದ ಸಾಂಪ್ರದಾಯಿಕ ಸಾದಾ ಮರಳನ್ನು ತೆಗೆಯಲು ಷರತ್ತು ಬದ್ಧ ಅನುಮತಿ ನೀಡಲಾಗುತ್ತಿದೆ. ಷರತ್ತು ಉಲ್ಲಂಘಿಸುವವರ ವಿರುದ್ಧ ಕಠಣ ಕ್ರಮ ಜರುಗಿಸಲಾಗುವುದು..

meeting
ಸಭೆ

By

Published : Sep 18, 2020, 9:13 PM IST

ಕಾರವಾರ :ಅಗತ್ಯ ಮರಳು ದೊರೆಯುತ್ತಿಲ್ಲ ಎಂದು ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಾಟ ನಡೆಸಿದಲ್ಲಿ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಡಾ. ಹರೀಶ್‌ಕುಮಾರ್ ಎಚ್ಚರಿಸಿದ್ದಾರೆ.

ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮರಳು ಉಸ್ತುವಾರಿ ಸಭೆ ನಡೆಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಅಗತ್ಯ ಕಾಮಗಾರಿಗಳಿಗೆ ಮರಳು ದೊರೆಯುತ್ತಿಲ್ಲ ಎನ್ನುವುದನ್ನೇ ನೆಪ ಮಾಡಿಕೊಂಡು ಅಕ್ರಮವಾಗಿ ಮರಳು ತೆಗೆದು ಸಾಗಿಸುವುದನ್ನು ಜಿಲ್ಲಾಡಳಿತ ಸಹಿಸುವುದಿಲ್ಲ. ಅಂತಹ ಪ್ರಕರಣಗಳನ್ನು ಪತ್ತೆ ಹಚ್ಚಲು ಕ್ರಮ ಕೈಗೊಳ್ಳಲಾಗಿದ್ದು, ಅಕ್ರಮ ಮರಳು ತೆಗೆಯುವುದು ಮತ್ತು ಸಾಗಾಣಿಕೆಯಲ್ಲಿ ತೊಡಗುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಸಿದ್ದಾರೆ.

ಸೆಪ್ಟಂಬರ್ 21ರಿಂದ ಸಾಂಪ್ರದಾಯಿಕವಾಗಿ ಸಾದಾ ಮರಳನ್ನು ತೆಗೆಯಲು ಷರತ್ತು ಬದ್ಧ ಅನುಮತಿಯನ್ನು ನೀಡಲಾಗುತ್ತಿದೆ. ಷರತ್ತುಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಣ ಕ್ರಮ ಜರುಗಿಸಲಾಗುವುದು. ಸಾರ್ವಜನಿಕರಿಗೆ ಯೋಗ್ಯದರದಲ್ಲಿ ಮರಳು ಲಭ್ಯವಾಗುವಂತೆ ನೋಡಿಕೊಳ್ಳಲು ಅವಶ್ಯವಿರುವಲ್ಲಿ ಜಿಲ್ಲಾ ನಿರ್ಮಿತಿ ಕೇಂದ್ರದ ವತಿಯಿಂದ ಸ್ಯಾಂಡ್ ಬ್ಯಾಂಕ್‌ಗಳನ್ನು ಸ್ಥಾಪಿಸಲು ಸೂಚಿಸಿದರು.

ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶಿವಪ್ರಕಾಶ ದೇವರಾಜು ಮಾತನಾಡಿ, ಜೋಯ್ಡಾ ಮತ್ತು ದಾಂಡೇಲಿಯಲ್ಲಿನ ಚೆಕ್ ಪೋಸ್ಟ್‌ಗಳನ್ನು ಬಲಪಡಿಸಲಾಗಿದ್ದು, ಚೆಕ್ ಪೋಸ್ಟ್‌ಗಳಿಗೆ ಸಿಸಿ ಟಿವಿ ಅಳವಡಿಸಲು ಸೂಚಿಸಲಾಗಿದೆ. ಅಲ್ಲದೇ ಪದೇಪದೆ ಅಕ್ರಮ ಮರಳು ತೆಗೆಯುವ ಬಗ್ಗೆ ಹೊನ್ನಾವರ ಮತ್ತು ಕುಮಟಾ ತಾಲೂಕುಗಳಲ್ಲಿ ಸಾರ್ವಜನಿಕರಿಂದ ದೂರುಗಳು ಬರುತ್ತಿರುವ ಹಿನ್ನೆಲೆ ಈ ಹಿಂದೆ ಇದ್ದ ಚೆಕ್ ಪೋಸ್ಟ್‌ಗಳ ಜತೆಗೆ ಅವಶ್ಯವಿದ್ದ ಸ್ಥಳಗಳಲ್ಲಿ ಹೆಚ್ಚುವರಿ ಚೆಕ್ ಪೋಸ್ಟಗಳನ್ನು ಕೂಡ ಸ್ಥಾಪಿಸಲು ಸೂಚಿಸಲಾಗಿದೆ ಎಂದರು.

ಅಲ್ಲದೇ ಈ ಎಲ್ಲಾ ಚೆಕ್‌ಪೋಸ್ಟಗಳಲ್ಲಿ ದಿನದ 24 ಗಂಟೆ ಕಾರ್ಯ ನಿರ್ವಹಿಸಲು ಪೊಲೀಸ್, ಕಂದಾಯ ಮತ್ತು ಅರಣ್ಯ ಇಲಾಖೆಗಳ ಸಿಬ್ಬಂದಿಯನ್ನು ನಿಯೋಜಿಸಲು ಕ್ರಮ ಜರುಗಿಸಲಾಗಿದೆ. ಪ್ರತಿ ತಾಲೂಕಿನಲ್ಲಿ ಮೊಬೈಲ್ ಸ್ಕ್ವಾಡ್ ಕೂಡ ನಿಯೋಜಿಸಲಾಗಿದೆ. ಯಾವುದೇ ಅಕ್ರಮ ಮರಳು ಸಾಗಾಣಿಕೆ ಕಂಡು ಬಂದಲ್ಲಿ ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ABOUT THE AUTHOR

...view details