ಕಾರವಾರ: ಸಮುದ್ರ ಅಲೆಗೆ ಸಿಲುಕಿ ನೀರು ಪಾಲಾಗುತ್ತಿದ್ದ ಒಂದೇ ಕುಟುಂಬದ ನಾಲ್ವರು ಪ್ರವಾಸಿಗರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಗೋಕರ್ಣದ ಓಂ ಬೀಚ್‌ನಲ್ಲಿ ನಡೆದಿದೆ.
ಈಜಲು ತೆರಳಿ ಅಪಾಯಕ್ಕೆ ಸಿಲುಕಿದ್ದರು.. ಸಮುದ್ರಪಾಲಾಗುತ್ತಿದ್ದ ನಾಲ್ವರನ್ನು ರಕ್ಷಿಸಿದ ಲೈಫ್ ಗಾರ್ಡ್ ಸಿಬ್ಬಂದಿ! - kannada news
ಸಮುದ್ರ ಅಲೆಗಳಿಗೆ ಸಿಲುಕಿ ನೀರುಪಾಲಾಗುತ್ತಿದ್ದ ಪ್ರವಾಸಿಗರನ್ನ ರಕ್ಷಿಸಿದ ಲೈಪ್ ಗಾರ್ಡ್ ಸಿಬ್ಬಂದಿ.
ಸಮುದ್ರಪಾಲಾಗುತ್ತಿದ್ದ ನಾಲ್ವರನ್ನು ರಕ್ಷಿಸಿದ ಲೈಫ್ ಗಾರ್ಡ್ ಸಿಬ್ಬಂದಿ
ಬೆಳಗಾವಿ ಮೂಲದ ಹುಸೇನ್(14), ಸಹಝಾದ್(26), ಅಬ್ದುಲ್ಲಾ(20), ಬೇಪರಿ(42) ರಕ್ಷಿಸಲ್ಪಟ್ಟ ಪ್ರವಾಸಿಗರು. ನೀರಿನಲ್ಲಿ ಈಜಾಡುತ್ತಿದ್ದಾಗ ಹುಸೇನ್ ಎಂಬ ಬಾಲಕ ಅಲೆಗಳಿಗೆ ಸಿಲುಕಿ ಕೊಚ್ಚಿಕೊಂಡು ಹೋಗುತ್ತಿದ್ದ, ಆತನನ್ನ ರಕ್ಷಿಸಲು ಮುಂದಾದ ಉಳಿದವರೂ ಅಪಾಯಕ್ಕೆ ಸಿಲುಕ್ಕಿದ್ದರು. ತಕ್ಷಣ ಕೂಗಿಕೊಂಡಿದ್ದು ಇದನ್ನ ಗಮನಿಸಿದ ಲೈಪ್ ಗಾರ್ಡ್ ಸಿಬ್ಬಂದಿ ಅಪಾಯಕ್ಕೆ ಸಿಲುಕಿದ್ದ ನಾಲ್ವರನ್ನೂ ರಕ್ಷಣೆ ಮಾಡಿದ್ದಾರೆ.