ಕಾರವಾರ(ಉತ್ತರ ಕನ್ನಡ): ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತೆರಳುವಾಗ ಹೆದ್ದಾರಿಯಲ್ಲಿ ಝೀರೋ ಟ್ರಾಫಿಕ್ ಮಾಡಿದ್ದ ವೇಳೆ ರಸ್ತೆ ಬದಿ ನಿಂತಿದ್ದ ಯುವಕನಿಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಆತ ಮೃತಪಟ್ಟಿದ್ದಾನೆ ಎಂದು ಆರೋಪಿಸಿ ಕಾರವಾರ ತಾಲೂಕಿನ ಚಿತ್ತಾಕುಲದಲ್ಲಿ ಭಾನುವಾರ ಸಂಜೆ ಪೊಲೀಸ್ ಠಾಣೆಯ ಎದುರು ಜನರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಸಿಎಂ ಪ್ರಮೋದ್ ಸಾವಂತ್ ಅವರು ಶುಕ್ರವಾರ ಧರ್ಮಸ್ಥಳಕ್ಕೆ ತೆರಳಿದ್ದರು. ಈ ವೇಳೆ ಚಿತ್ತಾಕುಲದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಝೀರೋ ಟ್ರಾಫಿಕ್ ಮಾಡಲಾಗಿತ್ತು. ಇದೇ ವೇಳೆ ಗೋವಾ ಕಡೆಯಿಂದ ಬರುತ್ತಿದ್ದ ಕಾರೊಂದು ರಸ್ತೆ ಬದಿಯಲ್ಲಿ ನಿಂತಿದ್ದವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.