ಶಿರಸಿ:ಕೋವಿಡ್-19 ತಡೆಗಟ್ಟುವ ಸಲುವಾಗಿ ಲಾಕ್ಡೌನ್ ಮಾಡಲಾಗಿದೆ. ಇದನ್ನು ಯಶಸ್ವಿಗೊಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ನಾವೆಲ್ಲರೂ ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಲಾಕ್ಡೌನ್ ಪಾಲನೆ ರಾಷ್ಟ್ರೀಯ ಕರ್ತವ್ಯ: ಸ್ಪೀಕರ್ ಕಾಗೇರಿ - Speaker Kageri
ಕೊರೊನಾ ತಡೆಗಟ್ಟುವ ಸಲುವಾಗಿ ಲಾಕ್ಡೌನ್ ಮಾಡಲಾಗಿದೆ. ಇದನ್ನು ಯಶಸ್ವಿಗೊಳಿಸಬೇಕಾಗಿರುವುದು ನಮ್ಮೆಲ್ಲರ ರಾಷ್ಟ್ರೀಯ ಕರ್ತವ್ಯವಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಸ್ಪೀಕರ್ ಕಾಗೇರಿ
ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ದೇಶವಾಸಿಗಳ ಸುರಕ್ಷತೆ ದೃಷ್ಟಿಯಿಂದ ಲಾಕ್ಡೌನ್ ಜಾರಿಗೊಳಿಸಿದ್ದಾರೆ.
ಜಿಲ್ಲೆಯಲ್ಲಿಯೂ ಸಹ ಜನತೆಗೆ ಅಗತ್ಯ ವಸ್ತುಗಳನ್ನು ತಲುಪಿಸುವುದಕ್ಕೆ ಸರ್ಕಾರಿ ಅಧಿಕಾರಿಗಳು ಸಿದ್ಧರಾಗಿದ್ದಾರೆ. ಈ ಲಾಕ್ಡೌನ್ ಸಮಯದಲ್ಲಿ ಸಾರ್ವಜನಿಕರ ಸಹಕಾರ ಬಹಳ ದೊಡ್ಡದಿದೆ. ಅವರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
Last Updated : Apr 6, 2020, 8:58 PM IST