ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಲಾಕ್‌ಡೌನ್ ನಿಯಮ ಮತ್ತೆ ಬದಲಾವಣೆಯಾಗಿದೆ. ಸೋಮವಾರದಿಂದ ಗುರುವಾರದವರೆಗೆ ಬೆಳಗ್ಗೆ 8 ರಿಂದ 12 ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿ ಇನ್ನುಳಿದ ಮೂರು ದಿನ ಸಂಪೂರ್ಣ ಬಂದ್ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶ ಹೊರಡಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಡಿಸಿ, ಲಾಕ್‌ಡೌನ್ ಅವಧಿಯಲ್ಲಿ ಅನಗತ್ಯ ವಾಹನ ಓಡಾಟಕ್ಕೆ ಅವಕಾಶ ಇಲ್ಲ.ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಂಟೇನ್ಮೆಂಟ್ ವಲಯಗಳನ್ನು ಗುರುತಿಸಲಾಗಿದ್ದು, ಯಾವುದೇ ರೀತಿಯ ಬದಲಾವಣೆಗಳಿಲ್ಲ. ಅದು ಸಂಪೂರ್ಣ ಬಂದ್ ಇರಲಿದ್ದು ,ಆಯಾ ಗ್ರಾಮ ಪಂಚಾಯಿತಿ ಮೂಲಕವೇ ಎಲ್ಲವನ್ನು ಪೂರೈಸಲಾಗುವುದು ಎಂದು ತಿಳಿಸಿದ್ದಾರೆ.