ಕರ್ನಾಟಕ

karnataka

ETV Bharat / state

ಧಗ ಧಗ ಹೊತ್ತಿ ಉರಿದ ರಾಸಾಯನಿಕ ತುಂಬಿದ ಲಾರಿ: ಚಾಲಕ, ಕ್ಲೀನರ್ ಪಾರು! - ETV Bharath Kannada news

ಹುಬ್ಬಳ್ಳಿಯಿಂದ ಅಂಕೋಲಾ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ರಾಸಾಯನಿಕ ತುಂಬಿದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಹೊತ್ತಿ ಉರಿದಿದೆ.

lorry-full-of-chemicals-caught-fire-in-uttara-kannada
ರಾಸಾಯನಿಕ ತುಂಬಿದ ಲಾರಿಗೆ ಬೆಂಕಿ

By

Published : Dec 24, 2022, 10:27 AM IST

ಧಗ ಧಗ ಹೊತ್ತಿ ಉರಿದ ರಾಸಾಯನಿಕ ತುಂಬಿದ ಲಾರಿ

ಕಾರವಾರ(ಉತ್ತರ ಕನ್ನಡ): ರಾಸಾಯನಿಕ ತುಂಬಿದ ಲಾರಿಯೊಂದು ಹೊತ್ತಿ ಉರಿದು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಅಂಕೋಲಾ‌ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ರ ವಜ್ರಳ್ಳಿ ಬಳಿ ಇಂದು ಮುಂಜಾನೆ ನಡೆದಿದೆ.

ಅದೃಷ್ಟವಶಾತ್ ಲಾರಿಯಲ್ಲಿದ್ದ ಕ್ಲೀನರ್ ಹಾಗೂ ಡ್ರೈವರ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಹುಬ್ಬಳ್ಳಿಯಿಂದ ಅಂಕೋಲಾ ಮಾರ್ಗವಾಗಿ ಮಂಗಳೂರಿಗೆ ಲಾರಿ ತೆರಳುತ್ತಿತ್ತು. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅಗ್ನಿಶಾಮಕ ದಳ, ಅರಣ್ಯ ಇಲಾಖೆ, ಪೊಲೀಸ್ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದೆ.

ಆದರೆ ರಾಸಾಯನಿಕ ತುಂಬಿದ ಕಾರಣ ಬೆಂಕಿ ದೊಡ್ಡ ಪ್ರಮಾಣದಲ್ಲಿ ಹೊತ್ತಿ ಉರಿದಿದೆ. ಬೆಂಕಿಯ ಕೆನ್ನಾಲಿಗೆಯಿಂದಾಗಿ ಸುತ್ತಮುತ್ತಲಿನ ಪ್ರದೇಶಕ್ಕೂ ಬೆಂಕಿ ತಗುಲಿತ್ತು. ತಕ್ಷಣ ಅರಣ್ಯ ಇಲಾಖೆ, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಬಗ್ಗೆ ಅಂಕೋಲಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಟೆಂಪೋ ಟ್ರಾವೆಲರ್: ಚಾಲಕ ಸೇರಿ ಇಬ್ಬರ ದುರ್ಮರಣ

For All Latest Updates

ABOUT THE AUTHOR

...view details