ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮನೆಗೆ ನುಗ್ಗಿದ ಘಟನೆ ಯಲ್ಲಾಪುರ ತಾಲೂಕಿನ ಕಿರುವತ್ತಿ ಗ್ರಾಮದಲ್ಲಿ ನಡೆದಿದೆ.
ಕಾರವಾರದಲ್ಲಿ ಹೆದ್ದಾರಿ ಪಕ್ಕದ ಮನೆಗೆ ನುಗ್ಗಿದ ಲಾರಿ : ತಪ್ಪಿದ ಭಾರಿ ಅನಾಹುತ - ಕಾರವಾರದಲ್ಲಿ ಹೆದ್ದಾರಿ ಬದಿ ಮನೆಗೆ ನುಗ್ಗಿದ ಲಾರಿ ತಪ್ಪಿದ ಬಾರಿ ಅನಾಹುತ
ಯಲ್ಲಾಪುರದಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದಾಗ ಲಾರಿ, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗಿನ ಮನೆಗೆ ನುಗ್ಗಿದ ಘಟನೆ ಯಲ್ಲಾಪುರ ತಾಲೂಕಿನ ಕಿರುವತ್ತಿ ಗ್ರಾಮದಲ್ಲಿ ನಡೆದಿದೆ.
ಯಲ್ಲಾಪುರದಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದಾಗ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗಿನ ಪಕ್ಕೀರಮ್ಮ ಭೀಮಣ್ಣ ನಾಯಕ ಎಂಬುವರ ಮನೆಗೆ ನುಗ್ಗಿದೆ. ಈ ವೇಳೆ ಮನೆಯಲ್ಲಿದ್ದವರು ಕಂಗಾಲಾಗಿದ್ದು, ಹೊರಗೆ ಓಡಿದ್ದಾರೆ. ಅದೃಷ್ಟವಶಾತ್ ಯಾವುದೇ ಅನಾಹುತ ನಡೆದಿಲ್ಲ. ಘಟನೆಯಲ್ಲಿ ಮನೆಯ ಮುಂಭಾಗ ಸಂಪೂರ್ಣ ಜಖಂ ಆಗಿದೆ.
ಲಾರಿ ಚಾಲಕ ಮತ್ತು ನಿರ್ವಾಹಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಯಲ್ಲಾಪುರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
TAGGED:
Road accident in Karwar