ಕಾರವಾರ:ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳ ಪೈಕಿ ಯುವಕ ಮೃತಪಟ್ಟಿದ್ದು, ಯುವತಿ ಗಂಭೀರಗೊಂಡಿರುವ ಘಟನೆ ಹೊನ್ನಾವರ ತಾಲೂಕಿನ ಮಂಕಿಯ ಬೈಲೂರು ಕ್ರಾಸ್ ಬಳಿ ನಡೆದಿದೆ.
ಮುರುಡೇಶ್ವರ ಮೂಲದ ಮಾಧವ್ (26, ಹೆಸರು ಬದಲಿಸಿದೆ) ಮೃತಪಟ್ಟ ಯುವಕ. ಸೌಮ್ಯ(22, ಹೆಸರು ಬದಲಿಸಿದೆ) ವಿಷ ಸೇವಿಸಿ ಗಂಭೀರಗೊಂಡಿದ್ದು, ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಸಾಗಿಸಲಾಗಿದೆ.
ಇಬ್ಬರೂ ಕಳೆದ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇಂದು ಬೈಲೂರು ಕ್ರಾಸ್ ಸಮೀಪ ಇಬ್ಬರೂ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು ಕೂಗಾಟ ಗಮನಿಸಿದ ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಪ್ರೇಮಿಗಳ ಆತ್ಮಹತ್ಯೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ನಿಖರ ಕಾರಣ ತಿಳಿದುಬಂದಿಲ್ಲ. ಮಂಕಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.