ಭಟ್ಕಳ:ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ ಭಟ್ಕಳದಲ್ಲಿ ಸೋಮವಾರದಂದು ಶಾಂತಿಯುತವಾಗಿ ನಡೆದಿದ್ದು, ಇಲ್ಲಿನ ನಾಮಧಾರಿ ಸಮಾಜದ ಅಧ್ಯಕ್ಷ ಎಂ.ಆರ್.ನಾಯ್ಕ ಪ್ರತಿಭಟನಾ ಸಮಾವೇಶದಲ್ಲಿ ಪಾಲ್ಗೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿಜೆ. ಇದಕ್ಕೆ ನಾಮಧಾರಿ ಸಮಾಜದ ಸಮಿತಿಯವರು, ಯುವಕರು ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತಪಡಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವಂತೆ ಪಟ್ಟು ಹಿಡಿದಿದ್ದಾರೆ.
ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆಗೆ ನಾಮಧಾರಿ ಸಮಾಜದ ಅಧ್ಯಕ್ಷ ಭಾಗಿಯಾಗಿದ್ದಕ್ಕೆ ವಿರೋಧ - ಭಟ್ಕಳದಲ್ಲಿ ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ
ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ ಭಟ್ಕಳದಲ್ಲಿ ಸೋಮವಾರದಂದು ಶಾಂತಿಯುತವಾಗಿ ನಡೆದಿದ್ದು, ಭಟ್ಕಳ ನಾಮಧಾರಿ ಸಮಾಜದ ಅಧ್ಯಕ್ಷ ಎಂ.ಆರ್.ನಾಯ್ಕ ಪ್ರತಿಭಟನಾ ಸಮಾವೇಶದಲ್ಲಿ ಪಾಲ್ಗೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದಕ್ಕೆ ನಾಮಧಾರಿ ಸಮಾಜದ ಸಮಿತಿಯವರು, ಯುವಕರು ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ.
ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆಗೆ ನಾಮಧಾರಿ ಸಮಾಜದ ಅಧ್ಯಕ್ಷ ಭಾಗಿ
ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹ:
ಸೋಮವಾರದಂದು ಸಂಜೆ ಶ್ರೀ ನಿಚ್ಛಲಮಕ್ಕಿ ವೆಂಕಟರಮಣ ದೇವಸ್ಥಾನದ ಸಭಾಂಗಣದಲ್ಲಿ ಭಟ್ಕಳ ನಾಮಧಾರಿ ಸಮಾಜದ ಮುಖಂಡರು, ಸಮಿತಿಯ ಮುಖಂಡರ ನೇತೃತ್ವದಲ್ಲಿ ಸಭೆಯ ನಡೆದಿದೆ. ಈ ಸಭೆಯಲ್ಲಿ ಅಧ್ಯಕ್ಷರ ನಡೆಯ ಬಗ್ಗೆ ಯುವಕರು, ಸಮಾಜದ ಮುಖಂಡರು ವಿರೋಧ ವ್ಯಕ್ತಪಡಿಸಿದರು. ಹಾಗೂ ಸಭೆಯಲ್ಲಿ ಎಮ್.ಆರ್.ನಾಯ್ಕ ಅವರಿಗೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವಂತೆ ಪಟ್ಟು ಹಿಡಿದಿದ್ದಾರೆ.