ಚಾಮರಾಜನಗರ: ಅಕ್ರಮವಾಗಿ ಕೇರಳ ಲಾಟರಿಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಚಾಮರಾಜನಗರ ತಾಲೂಕಿನ ಗೂಳಿಪುರ ಗ್ರಾಮದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಗ್ರಾಮದ ನಂಜುಂಡಸ್ವಾಮಿ @ಜುಟ್ಟು ಬಂಧಿತ.
ಕೇರಳ ಲಾಟರಿ ಮಾರಾಟ: ಚಾಮರಾಜನಗರದಲ್ಲಿ ಆರೋಪಿ ಬಂಧನ
ಕೇರಳದಿಂದ ಅಕ್ರಮವಾಗಿ ಲಾಟರಿ ಟಿಕೆಟ್ಗಳನ್ನು ತಂದು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಚಾಮರಾಜನಗರ ಪೊಲೀಸರು ಬಂಧಿಸಿದ್ದಾರೆ.
ಕೇರಳ ಲಾಟರಿ ಮಾರಾಟ ವ್ಯಕ್ತಿ ಬಂಧನ
ಕೇರಳದಿಂದ ಲಾಟರಿ ಟಿಕೆಟ್ಗಳನ್ನು ತಂದು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪಿಎಸ್ಐ ತಾಜುದ್ದಿನ್ ದಾಳಿ ನಡೆಸಿ ವ್ಯಕ್ತಿಯನ್ನು ಬಂಧಿಸಿದ್ದಾರೆ. 67 ಸಾವಿರ ರೂ. ಬೆಲೆಯ 1,676 ಕೇರಳ ಲಾಟರಿಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸಂತೇಮರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಹುಬ್ಬಳ್ಳಿಯಲ್ಲಿ ಖಾಸಗಿ ಬಸ್-ಲಾರಿ ಮಧ್ಯೆ ಭೀಕರ ಅಪಘಾತ: 9 ಮಂದಿ ದುರ್ಮರಣ