ಶಿರಸಿ: ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಮುಂದಾಗಿ ನಾಪತ್ತೆಯಾಗಿದ್ದ ವಿವಾಹಿತನೋರ್ವನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದಿದೆ.
ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಯ ಬಂಧನ - Sirsi
ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಮುಂದಾಗಿದ್ದ ಆರೋಪದಡಿ ವಿವಾಹಿತನೋರ್ವನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ಅಪ್ರಾಪ್ತೆ ಮೇಲೆ ಅತ್ಯಾಚಾರ ಯತ್ನ: ಆರೋಪಿ ಪೊಲೀಸ್ ವಶಕ್ಕೆ
ಸಿದ್ದಾಪುರದ ಉದಯ ನಾಯ್ಕ ಅಂಬಳ್ಳಿ ಬಂಧಿತ ಆರೋಪಿ. ಈತ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಶಿರಸಿ ಡಿವೈಎಸ್ಪಿ ಜಿ.ಟಿ.ನಾಯ್ಕ ನೇತೃತ್ವದಲ್ಲಿ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ.
ಉದಯ ನಾಯಕ ಈಗಾಗಲೇ ಗ್ರಾಮದ ರಸ್ತೆಯಲ್ಲಿ ಶಾಲಾ ಮಕ್ಕಳಿಗೆ ತೊಂದರೆ ಕೊಟ್ಟ ಘಟನೆಗಳು ಈ ಹಿಂದೆಯೂ ನಡೆದಿದ್ದವು ಎನ್ನಲಅಗಿದೆ. ಇದೀಗ ಪೋಕ್ಸೋ ಕಾಯ್ದೆಯಡಿ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.