ಭಟ್ಕಳ:ವ್ಯಕ್ತಿಯೊಬ್ಬ ಕೌಟುಂಬಿಕ ಕಲಹದಿಂದ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಮುರ್ಡೇಶ್ವರದ ನ್ಯಾಷನಲ್ ಕಾಲೋನಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಮೊಹಮ್ಮದ್ ಇಬ್ರಾಹಿಂ (28) ಎಂದು ಗುರುತಿಸಲಾಗಿದೆ.
ಭಟ್ಕಳ:ವ್ಯಕ್ತಿಯೊಬ್ಬ ಕೌಟುಂಬಿಕ ಕಲಹದಿಂದ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಮುರ್ಡೇಶ್ವರದ ನ್ಯಾಷನಲ್ ಕಾಲೋನಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಮೊಹಮ್ಮದ್ ಇಬ್ರಾಹಿಂ (28) ಎಂದು ಗುರುತಿಸಲಾಗಿದೆ.
ಈತ ಮುರ್ಡೇಶ್ವರದಲ್ಲಿ ರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಕಳೆದ 7 ವರ್ಷದ ಹಿಂದೆ ಮದುವೆಯಾಗಿ ತನ್ನ ಮನೆಯಲ್ಲಿದ್ದ ಇಬ್ರಾಹಿಂ ಕೌಟುಂಬಿಕ ಕಲಹದ ಕಾರಣ ಕಳೆದ 2 ವರ್ಷದ ಹಿಂದೆ ಇಲ್ಲಿನ ನ್ಯಾಷನಲ್ ಕಾಲೋನಿಯ ಹಿರೇದೋಮಿಯ ನಾಗೇಶ ಕಾಂಪೌಂಡ್ನಲ್ಲಿ ತನ್ನ ಹೆಂಡತಿ, ಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಎಂಬ ಮಾಹಿತಿ ಇದೆ.
ಆದ್ರೆ, ಮಂಗಳವಾರ ಸಂಜೆ 6 ರಿಂದ 8 ಗಂಟೆಯ ಸುಮಾರಿಗೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಈ ಘಟನೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಮೃತನ ತಂದೆ ಮಕ್ದುಮ್ ಇಸ್ಮಾಯಿಲ್ ಇಬ್ರಾಹಿಂ ಶಿರೂರು ಅವರು ಮುರ್ಡೇಶ್ವರ ಠಾಣೆಗೆ ದೂರು ನೀಡಿದ್ದು, ಠಾಣಾ ಪಿ.ಎಸ್.ಐ. ಪುಟ್ಟಸ್ವಾಮಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.