ಕರ್ನಾಟಕ

karnataka

ETV Bharat / state

ಕಾರವಾರದಲ್ಲಿ ರೈಲಿಗೆ ಸಿಲುಕಿ ವ್ಯಕ್ತಿ ದಾರುಣ ಸಾವು - ಕಾರವಾರ ಲೇಟೆಸ್ಟ್ ನ್ಯೂಸ್

ಕಾರವಾರ ಜಿಲ್ಲೆಯ ಕುಮಟಾ ತಾಲೂಕಿನ ಬರ್ಗಿ ಗ್ರಾಮದಲ್ಲಿ ಹಳಿಯ ಮೇಲೆ ನಡೆದು ಹೋಗುತ್ತಿದ್ದ ವ್ಯಕ್ತಿಗೆ ರೈಲು ಬಡಿದು ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಾರವಾರದಲ್ಲಿ ರೈಲು ಬಡಿದು ವ್ಯಕ್ತಿ ದಾರುಣ ಸಾವು
Man died by train collision in Karwar

By

Published : Feb 21, 2021, 12:41 PM IST

ಕಾರವಾರ:ಹಳಿಯ ಮೇಲೆ ನಡೆದು ಹೋಗುತ್ತಿದ್ದ ವ್ಯಕ್ತಿಗೆ ರೈಲು ಬಡಿದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕುಮಟಾ ತಾಲೂಕಿನ ಬರ್ಗಿ ಗ್ರಾಮದ ಬಳಿ ನಡೆದಿದೆ.

ಬರ್ಗಿಯ ವೆಂಕಟರಮಣ ಪಟಗಾರ (52) ಮೃತ ದುರ್ದೈವಿ. ರೈಲು ಬರುವುದನ್ನು ಗಮನಿಸದೆ ಹಳಿಯ ಮೇಲೆಯೇ ಇವರು ನಡೆಯುತ್ತಿದ್ದರು. ಈ ಸಂದರ್ಭದಲ್ಲಿ ಇವರಿಗೆ ರೈಲು ಹಾಯ್ದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಗೋಕರ್ಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details