ಶಿರಸಿ:ಭಾರಿ ಗಾಳಿ, ಮಳೆಗೆ ಮನೆ ಕುಸಿದು ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸಿದ್ದಾಪುರ ತಾಲೂಕಿನ ಕ್ಯಾದಗಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಚಂದ್ರಶೇಖರ ನಾರಾಯಣ ಹಸ್ಲರ್ (23) ಮೃತ ದುರ್ದೈವಿ.
ಸಿದ್ದಾಪುರ: ಭಾರಿ ಮಳೆ, ಗಾಳಿಗೆ ಮನೆ ಕುಸಿದು ಬಿದ್ದು ವ್ಯಕ್ತಿ ಸಾವು - ವ್ಯಕ್ತಿ ಸಾವು
ಮನೆ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸಿದ್ದಾಪುರದಲ್ಲಿ ನಡೆದಿದೆ.
ಮನೆ ಕುಸಿದು ಬಿದ್ದು ವ್ಯಕ್ತಿ ಸಾವು
ಮನೆ ಬಿದ್ದ ತಕ್ಷಣ ಗಾಯಾಳು ಚಂದ್ರಶೇಖರ ಅವರನ್ನು ಶಿವಮೊಗ್ಗಕ್ಕೆ ಹೆಚ್ಚಿನ ಚಿಕಿತ್ಸೆಗೆ ಕರೆದೊಯ್ಯುಲಾಗುತ್ತಿತ್ತು. ಈ ಸಂದರ್ಭ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ 2 ದಿನಗಳಿಂದ ಸಿದ್ದಾಪುರದಲ್ಲಿ ಜೋರು ಮಳೆ ಸುರಿಯುತ್ತಿದೆ. ಇದರಿಂದ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಕಂದಾಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಇದನ್ನೂ ಓದಿ:ಉತ್ತರಕನ್ನಡದಲ್ಲಿ ಭಾರಿ ಮಳೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಸಿದ ಭೂಮಿ