ಕಾರವಾರ: ಕೊರೊನಾ ಸೋಂಕಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೋರ್ವ ಬಲಿಯಾಗಿದ್ದು, ಸಾವಿನ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.
ಉತ್ತರ ಕನ್ನಡದಲ್ಲಿ ಕೊರೊನಾಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ 20ಕ್ಕೆ ಏರಿಕೆ - ಉತ್ತರ ಕನ್ನಡ ಕೊರೊನಾ ಸೋಂಕಿತ ಸಾವು
ಕಾರವಾರದ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಅಂಕೋಲಾ ಮೂಲದ 76 ವರ್ಷದ ವೃದ್ಧ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
Corona
ಅಂಕೋಲಾ ಮೂಲದ 76 ವರ್ಷದ ವ್ಯಕ್ತಿ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯನ್ನು ನಿನ್ನೆ ಕಾರವಾರದ ಆಸ್ಪತ್ರೆಗೆ ಕರೆ ತರಲಾಗಿತ್ತು. ಬಳಿಕ ಆತನ ಗಂಟಲು ದ್ರವ ಪರೀಕ್ಷೆ ನಡೆಸಿದಾಗ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು.
ಸೋಂಕಿತ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಹಿನ್ನೆಲೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.