ಕಾರವಾರ:ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿದ ವ್ಯಕ್ತಿಯೋರ್ವ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಹೊನ್ನಾವರದಲ್ಲಿ ನಡೆದಿದೆ.
ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿ ಪ್ರಾಣ ಕಳೆದುಕೊಂಡ ಸವಾರ! - ಬೈಕ್ ಸವಾರ
ಬೈಕ್ ಸವಾರನೋರ್ವ ಅಪಘಾತವಾಗಿ ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಹೊನ್ನಾವರದಲ್ಲಿ ನಡೆದಿದೆ. ಹೆಲ್ಮೆಟ್ ಧರಿಸದೆ ಬೈಕ್ ರೈಡ್ ಮಾಡಿದ್ದರಿಂದಲೇ ಸವಾರ ಸಾವನ್ನಪ್ಪಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಪ್ರಾಣ ಕಳೆದುಕೊಂಡ ಸವಾರ
ತಾಲೂಕಿನ ಚಂದಾವರ ಸಮೀಪ ಘಟನೆ ನಡೆದಿದ್ದು, ಭಟ್ಕಳ ತಾಲೂಕಿನ ತೆಂಗಿನಗುಂಡಿ ನಿವಾಸಿ ಶ್ರೀಧರ್ ನಾಯ್ಕ್ ಸಾವನ್ನಪ್ಪಿದ ವ್ಯಕ್ತಿ ಎನ್ನಲಾಗಿದೆ. ಈತ ವೈಯಕ್ತಿಕ ಕೆಲಸದ ನಿಮಿತ್ತ ಬೈಕ್ ಮೇಲೆ ಚಂದಾವರಕ್ಕೆ ತೆರಳಿದ್ದ. ದುರದೃಷ್ಟವಶಾತ್ ಬೈಕ್ ನಿಯಂತ್ರಣ ತಪ್ಪಿ ಬಿದ್ದ ಕಾರಣ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಹೆಲ್ಮೆಟ್ ಧರಿಸಿದ್ದರೆ ಪ್ರಾಣಾಪಾಯದಿಂದ ಪಾರಾಗುವ ಸಾಧ್ಯತೆ ಇತ್ತು ಎನ್ನುವುದು ಸ್ಥಳೀಯರ ಅಭಿಪ್ರಾಯ. ಈ ಬಗ್ಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.