ಕಾರವಾರ: ಕ್ಯಾನ್ಸರ್ ಕಾಯಿಲೆಯಿಂದ ಬಳಲುತಿದ್ದ ವ್ಯಕ್ತಿಯೋರ್ವ ತಾನೇ ಒಟ್ಟುಗೂಡಿಸಿದ ಕಟ್ಟಿಗೆ ಮೇಲೆ ಮಲಗಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವಿಚಿತ್ರ ಘಟನೆ ಯಲ್ಲಾಪುರದ ಕೊಂಕಣ ಕೊಪ್ಪದಲ್ಲಿ ಬೆಳಕಿಗೆ ಬಂದಿದೆ.
ತಾನೇ ಒಟ್ಟುಗೂಡಿಸಿದ ಕಟ್ಟಿಗೆಗೆ ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ - ಕಾರವಾರ ಅಪರಾಧ ಸುದ್ದಿ
ವ್ಯಕ್ತಿಯೋರ್ವ ತಾನೇ ಒಟ್ಟುಗೂಡಿಸಿದ ಕಟ್ಟಿಗೆ ಮೇಲೆ ಮಲಗಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವಿಚಿತ್ರ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ.

ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ
ಶಿವರಾಮ ರಾಮಕೃಷ್ಣ ಹೆಗಡೆ (60) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕ್ಯಾನ್ಸರ್ ಕಾಯಿಲೆಯಿಂದ ನರಳುತ್ತಿದ್ದ ಈತ, ಚಿಕಿತ್ಸೆ ಪಡೆದರೂ ಗುಣಮುಖನಾಗಿರಲಿಲ್ಲ. ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ಕಳೆದ ಎರಡು ತಿಂಗಳಿಂದ ಸರಿಯಾಗಿ ಆಹಾರ ಸೇವಿಸುತ್ತಿರಲಿಲ್ಲ ಎಂಬ ಮಾಹಿತಿ ದೊರೆತಿದೆ. ಮಂಗಳವಾರ ಕೊಂಕಣಕೊಪ್ಪ ಅರಣ್ಯ ಪ್ರದೇಶದಲ್ಲಿ ತಾನೇ ಕಟ್ಟಿಗೆ ಒಟ್ಟುಗೂಡಿಸಿ ಬಳಿಕ ಕಟ್ಟಿಗೆಗೆ ಬೆಂಕಿ ಹಚ್ಚಿಕೊಂಡಿದ್ದಾನೆ.
ಈ ಬಗ್ಗೆ ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.