ಶಿರಸಿ :ನಗರದಲ್ಲಿ ನಡೆಯುತ್ತಿರುವ ಅಕ್ರಮ ಗಾಂಜಾ ಮಾರಾಟದ ತನಿಖೆಯನ್ನು ಮುಂದುವರೆಸಿರುವ ಪೊಲೀಸರು, ಆರೋಪಿತರ ಸಂಪರ್ಕದಲ್ಲಿದ್ದ ಇಬ್ಬರು ಸಂಶಯಾಸ್ಪದ ವ್ಯಕ್ತಿಗಳನ್ನು ಬಂಧಿಸಿದ್ದಾರೆ.
ಗಾಂಜಾ ನಂಟು; ಶಿರಸಿಯಲ್ಲಿ ಮತ್ತಿಬ್ಬರು ಆರೋಪಿಗಳ ಬಂಧನ - Marijuana selling case
ಅಕ್ರಮ ಗಾಂಜಾ ಮಾರಾಟ ಮತ್ತು ಸಾಗಾಟ ಪ್ರಕರಣ ಸಂಬಂಧ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
Accused
ಕಸ್ತೂರ ಬಾ ನಗರದ ಮಹ್ಮದ್ ಹಫೀಜ್ ಹಾಗೂ ದರ್ಶನ್ ತಡಕಳ್ಳಿ ಬಂಧಿತ ಆರೋಪಿಗಳು. ಆರೋಪಿತರನ್ನು ದಸ್ತಗಿರಿ ಮಾಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಸಂಶಯಾಸ್ಪದ ಆರೋಪಿತರ ಮೇಲೆ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ.
ಇಲ್ಲಿಯವರೆಗೆ ಸುಮಾರು 10 ಕ್ಕೂ ಅಧಿಕ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಶಿರಸಿ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.