ಭಟ್ಕಳ:ಕಳೆದ ಏಳು ದಿನಗಳಿಂದ ಕೆಲಸದಿಂದ ಹೊರಗುಳಿದು ಮನೆಯಲ್ಲಿಯೇ ಇದ್ದು ಪ್ರತಿಭಟನೆ ನಡೆಸುತ್ತಿದ್ದ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಹಶೀಲ್ದಾರ್ ಎಸ್.ರವಿಚಂದ್ರನ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಭಟ್ಕಳ: ಗುತ್ತಿಗೆ - ಹೊರಗುತ್ತಿಗೆ ನೌಕರರ ಬೇಡಿಕೆ ಈಡೇರಿಸುವಂತೆ ಒತ್ತಾಯ - Bhatkal protest news
ಕೊರೊನಾ ವಾರ್ಡ್‌ಗಳಲ್ಲಿ ಅನೇಕರು ಕೆಲಸ ನಿರ್ವಹಿಸುತ್ತಿದ್ದಾರೆ. ಕಳೆದ ಏಳು ದಿನಗಳಿಂದ ಕೆಲಸ ಮಾಡದೇ ಹೋರಾಟ ಮಾಡುತ್ತಿದ್ದರೂ ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸಿಲ್ಲ. ಬೇಡಿಕೆಗೆ ಸ್ಪಂದಿಸುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.
ನಂತರ ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗುತ್ತಿಗೆ ಹಾಗೂ ಹೊರಗುತ್ತಿಗೆಯಲ್ಲಿ ವೈದ್ಯರು, ನರ್ಸ್‌ಗಳು, ಸಹಾಯಕರು, ಕಂಪ್ಯೂಟರ್ ಆಪರೇಟರ್‌ಗಳು, ಸೇರಿದಂತೆ 33 ಮಂದಿ ಆರೋಗ್ಯ ಇಲಾಖೆಯಡಿ ಶಿರಾಲಿ ಮತ್ತು ಭಟ್ಕಳ ತಾಲೂಕು ಆಸ್ಪತ್ರೆಗಳಲ್ಲಿ ಕಡಿಮೆ ವೇತನಕ್ಕೆ ದುಡಿಯುತ್ತಿದ್ದಾರೆ. ಕೊರೊನಾ ವಾರ್ಡ್‌ಗಳಲ್ಲಿ ಅನೇಕರು ಕೆಲಸ ನಿರ್ವಹಿಸುತ್ತಿದ್ದಾರೆ. ಕಳೆದ ಏಳು ದಿನಗಳಿಂದ ಕೆಲಸ ಮಾಡದೇ ಹೋರಾಟ ಮಾಡುತ್ತಿದ್ದರೂ ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸಿಲ್ಲ. ಬೇಡಿಕೆಗೆ ಸ್ಪಂದಿಸುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.
ಕೊರೊನಾ ಸಂದರ್ಭದಲ್ಲಿ ಒಂದು ದಿನವೂ ರಜೆ ಇಲ್ಲದಂತೆ ದುಡಿಯುತ್ತಿದ್ದರೂ ನಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಕೊರೊನಾ ವಾರಿಯರ್ಸ್ ಎಂದು ಹೇಳುವ ಸರ್ಕಾರ ಯಾವುದೇ ಸೌಲಭ್ಯ ನೀಡುತ್ತಿಲ್ಲ. ಕಳೆದ 10-15 ವರ್ಷಗಳಿಂದ ದುಡಿಯುತ್ತಿದ್ದೇವೆ. ಆದರೆ, ಕೇವಲ 8 ರಿಂದ 9 ಸಾವಿರ ರೂ. ವೇತನ ನೀಡುತ್ತಿದ್ದಾರೆ. ಇದರಿಂದ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಅಲ್ಲದೆ, ಕೊರೊನಾ ಸಂದರ್ಭದಲ್ಲಿ ನೌಕರರಿಗೆ ಏನಾದರೂ ತೊಂದರೆಯಾದರೆ ನಮ್ಮ ಗೋಳು ಕೇಳುವವರಿಲ್ಲ ಎಂದು ಅಳಲು ತೋಡಿಕೊಂಡರು.