ಶಿರಸಿ (ಉತ್ತರ ಕನ್ನಡ):ಶೃಂಗೇರಿಯಲ್ಲಿ ಆದಿ ಶಂಕರಾಚಾರ್ಯರ ಮೂರ್ತಿಯ ಪಕ್ಕದಲ್ಲಿ ಎಸ್ಡಿಪಿಐ ಬಾವುಟ ಹಾರಿಸಿರುವ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅವರು ತಪ್ಪಿತಸ್ಥರ ಮೇಲೆ ಕ್ರಮ ಆಗಬೇಕು ಎಂದು ಆಗ್ರಹಿಸಿದ್ದಾರೆ.
ಎಸ್ಡಿಪಿಐ ವಿರುದ್ಧ ಕ್ರಮಕ್ಕೆ ಸಚಿವ ಹೆಬ್ಬಾರ್ ಆಗ್ರಹ - ಎಸ್ಡಿಪಿಐ
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ಆದಿ ಶಂಕರಾಚಾರ್ಯ ಮೂರ್ತಿಯ ಸಮೀಪದಲ್ಲಿ ಎಸ್ಡಿಪಿಐ ಬಾವುಟ ಹಾರಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಶಿವರಾಮ ಹೆಬ್ಬಾರ್ ಒತ್ತಾಯಿಸಿದರು.
ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್
ಯಲ್ಲಾಪುರದಲ್ಲಿ ಮಾತನಾಡಿದ ಅವರು, ಬಾವುಟ ಹಾರಿಸುವ ಮೂಲಕ ಬ್ರಾಹ್ಮಣ ಸಮುದಾಯಕ್ಕೆ ಹಾಗೂ ಶಂಕರಾಚಾರ್ಯರ ಪೀಠಕ್ಕೆ ಎಸ್ಡಿಪಿಐ ಅವಮಾನ ಮಾಡಿದೆ. ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಎಸ್ಡಿಪಿಐ ಹೀಗೆ ಮಾಡುತ್ತಿದೆ ಎಂದು ಆರೋಪಿಸಿದರು.