ಕರ್ನಾಟಕ

karnataka

By

Published : Sep 7, 2021, 7:10 PM IST

Updated : Sep 7, 2021, 7:38 PM IST

ETV Bharat / state

ಹೆಣ್ಣುಮಕ್ಕಳ ಸುರಕ್ಷತೆಗಾಗಿ ಡಿಜಿಟಲೈಸ್ಡ್ ವ್ಯವಸ್ಥೆ.. ಸಚಿವ ಮಾಧುಸ್ವಾಮಿ

ಕಲಬುರಗಿ ಮಹಾನಗರ ಪಾಲಿಕೆಯ ಫಲಿತಾಂಶದ ಬಗ್ಗೆ ನಾನು ಹೇಗೆ ಹೇಳಲು ಸಾಧ್ಯ? ಅದನ್ನು ಪಕ್ಷ ನಿರ್ಧರಿಸುತ್ತದೆ. ಸಂಘಟಿತ ತೀರ್ಮಾನವಾಗೋ ಮೊದಲೇ ಮಾತನಾಡಬಾರದು. ನಾನು ಈ ಬಗ್ಗೆ ಚರ್ಚೆ ಮಾಡುವುದಿಲ್ಲ ಎಂದು ಸಚಿವ ಮಾಧುಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಇದೇ ವೇಳೆ ಹೆಣ್ಣುಮಕ್ಕಳ ಸುರಕ್ಷತೆಗೆ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಮಾತನಾಡಿದರು.

ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಾಧುಸ್ವಾಮಿ
ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಾಧುಸ್ವಾಮಿ

ಕಾರವಾರ (ಉತ್ತರ ಕನ್ನಡ) :ಹೆಣ್ಣುಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಜಾರಿಗೊಳಿಸಲಾಗಿದೆ. ಆದರೆ, ಹೆಚ್ಚು ಅರಣ್ಯ ಪ್ರದೇಶವನ್ನು ಹೊಂದಿರುವ ಉತ್ತರ ಕನ್ನಡ, ದಕ್ಷಿಣ ಕನ್ನಡಗಳಂತಹ ಜಿಲ್ಲೆಗಳಲ್ಲಿ ಈ ವ್ಯವಸ್ಥೆ ಕಷ್ಟವಾದರೂ ಕೂಡ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸುರಕ್ಷತೆ ಒದಗಿಸಲು ಕ್ರಮಕೈಗೊಳ್ಳಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ ಹೇಳಿದ್ದಾರೆ.

ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಾಧುಸ್ವಾಮಿ

ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲೆಲ್ಲಿ ಹೆಣ್ಣುಮಕ್ಕಳು ನಿಂತುಕೊಳ್ಳುತ್ತಾರೆ, ಬಸ್‌ಗೆ ಕಾಯುತ್ತಿರುತ್ತಾರೆ ಎಂದು ತಿಳಿಯಲು ಡಿಜಿಟಲೈಸ್ಡ್ ವ್ಯವಸ್ಥೆ ಮಾಡಿದ್ದೇವೆ. ಈ ವ್ಯವಸ್ಥೆಯನ್ನು ಬೆಂಗಳೂರು ಹಾಗೂ ತುಮಕೂರಿನಲ್ಲಿ ಸದ್ಯ ಅಳವಡಿಸಲಾಗಿದೆ.

ಮೈಸೂರು, ತುಮಕೂರಿನಲ್ಲಿ ಅತ್ಯಾಚಾರ ಘಟನೆ ನಡೆದ ಬಳಿಕ ಪೊಲೀಸ್ ಕಚೇರಿಗಳಲ್ಲಿ ಹೆಚ್ಚಿನ ಕ್ರಮಕ್ಕೆ ಆದೇಶ ಮಾಡಲಾಗಿದೆ. ಹೆಣ್ಣುಮಕ್ಕಳು ಒಂಟಿಯಾಗಿ ಹೋಗಿ ಬರುವ ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾ, ಹೆಚ್ಚಿನ ಪ್ರಮಾಣದಲ್ಲಿ ಭದ್ರತೆ ಒದಗಿಸಲು ಚರ್ಚೆ ಮಾಡಲಾಗುತ್ತಿದೆ ಎಂದರು.

ಆದರೆ, ಕೆಲ ಗ್ರಾಮಾಂತರ ಸೂಕ್ಷ್ಮ ಪ್ರದೇಶಗಳಲ್ಲಿ ಸುರಕ್ಷತೆ ಒದಗಿಸಲು ಕಷ್ಟವಾಗುತ್ತೆ. ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸುರಕ್ಷತೆ ಒದಗಿಸುತ್ತದೆ. ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಭಾಗಗಳು ಹೆಚ್ಚಾಗಿವೆ.

ಈ ಕಾರಣದಿಂದ ಅಲ್ಲೆಲ್ಲ ಹೆಚ್ಚು ಗಮನ ಹರಿಸಬೇಕಾಗುತ್ತದೆ. ಹೆಣ್ಣುಮಕ್ಕಳು ಎಲ್ಲಿ ಹೋಗ್ತಾರೆ ಬರ್ತಾರೆ ಎಂದು ನೋಡಿಕೊಳ್ಳಬೇಕಾಗುತ್ತದೆ. ಒಳ ಪ್ರದೇಶಗಳಲ್ಲಿ ಯಾವಾಗ ಏನು ಆಗುತ್ತದೆ ಎಂದು ಹೇಳಲಾಗುವುದಿಲ್ಲ ಎಂದು ಸಚಿವರು ತಿಳಿದರು.

ಇದನ್ನೂ ಓದಿ: ಮೈಸೂರು ರೇಪ್ ಪ್ರಕರಣವನ್ನ ಮುಚ್ಚಿ ಹಾಕುವ ಯತ್ನ ನಡೆದಿದೆ.. ಮಾಜಿ ಸಂಸದ ವಿ ಎಸ್ ಉಗ್ರಪ್ಪ ಆರೋಪ

ಕಲಬುರಗಿ ಮಹಾನಗರ ಪಾಲಿಕೆಯ ಫಲಿತಾಂಶದ ಬಗ್ಗೆ ನಾನು ಹೇಗೆ ಹೇಳಲು ಸಾಧ್ಯ? ಅದನ್ನು ಪಕ್ಷ ನಿರ್ಧರಿಸುತ್ತದೆ. ಸಂಘಟಿತ ತೀರ್ಮಾನವಾಗೋ ಮೊದಲೇ ಮಾತನಾಡಬಾರದು. ನಾನು ಈ ಬಗ್ಗೆ ಚರ್ಚೆ ಮಾಡುವುದಿಲ್ಲ ಎಂದು ಮಾಧುಸ್ವಾಮಿ ಹೇಳಿದರು.

ಉತ್ತರ ಕನ್ನಡ ಜಿಲ್ಲೆಗೆ ಈ ಹಿಂದೆಯೇ ಬರಬೇಕಿತ್ತು. ಆದರೆ, ಉಸ್ತುವಾರಿ ಸಚಿವರು ಆಹ್ವಾನಿಸಿದಾಗ ಬ್ಯುಸಿ ಇದ್ದಿದ್ದರಿಂದ ಇಂದು ಭೇಟಿ ನೀಡಿದ್ದೇನೆ. ಆದರೆ, ಉಸ್ತುವಾರಿ ಸಚಿವರು ಇಂದು ಬ್ಯುಸಿಯಾಗಿಬಿಟ್ಟಿದ್ದಾರೆ ಎಂದು ಇದೇ ವೇಳೆ ಹೇಳಿದರು.

Last Updated : Sep 7, 2021, 7:38 PM IST

ABOUT THE AUTHOR

...view details