ಕರ್ನಾಟಕ

karnataka

ETV Bharat / state

ನೆರೆಹಾನಿ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವೆ: ಸಚಿವೆ ಶಶಿಕಲಾ ಜೊಲ್ಲೆ

ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಮೊದಲ ಬಾರಿಗೆ ಸಚಿವೆ ಶಶಿಕಲಾ ಜೊಲ್ಲೆ ಇಂದು ಅಧಿಕಾರಿಗಳೊಂದಿಗೆ ನೆರೆ ಪರಿಹಾರದ ಕುರಿತು ಸಭೆ ನಡೆಸಿದರು.

ಸಚಿವೆ ಶಶಿಕಲಾ ಜೊಲ್ಲೆ

By

Published : Oct 1, 2019, 6:19 PM IST

ಕಾರವಾರ: ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಮೊದಲ ಬಾರಿಗೆ ಸಚಿವೆ ಶಶಿಕಲಾ ಜೊಲ್ಲೆ ಇಂದು ಅಧಿಕಾರಿಗಳೊಂದಿಗೆ ನೆರೆ ಪರಿಹಾರದ ಕುರಿತು ಸಭೆ ನಡೆಸಿದರು.

ಸಚಿವೆ ಶಶಿಕಲಾ ಜೊಲ್ಲೆ

ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ್, ಜಿಲ್ಲೆಯಲ್ಲಿ ಆಗಸ್ಟ್ ಮೊದಲ ಮತ್ತು ಎರಡನೇ ವಾರ ಅತಿ ಹೆಚ್ಚು ಮಳೆಯಾಗಿದೆ. ಭಟ್ಕಳ ಸೇರಿದಂತೆ ಕೆಲವೆಡೆ ವರ್ಷದಲ್ಲಿ ಬೀಳುವ ವಾಡಿಕೆ ಮಳೆ ಒಂದೇ ದಿನ ಸುರಿದ ಪರಿಣಾಮ ನೆರೆಹಾನಿಗೆ ಕಾರಣವಾಗಿತ್ತು. ಇನ್ನು ಬೆಳಗಾವಿಯಲ್ಲಿ ಸುರಿದ ಮಳೆಯಿಂದಾಗಿ ಜಿಲ್ಲೆಯ ನದಿಗಳಿಗೆ ಹೆಚ್ಚು ನೀರು ಹರಿದು ಬಂದ ಪರಿಣಾಮ ಸಾಕಷ್ಟು ಹಾನಿಯಾಗಿರುವ ಕುರಿತು ಮಾಹಿತಿ ನೀಡಿದರು.

ಬಳಿಕ ಶಾಸಕರಾದ ದಿನಕರ ಶೆಟ್ಟಿ, ಸುನೀಲ್ ನಾಯ್ಕ, ರೂಪಾಲಿ ನಾಯ್ಕ ಮಾತನಾಡಿ, ನೆರೆಯಿಂದ ಸಾವಿರಾರು ಜನರು ಮನೆ ಕಳೆದುಕೊಂಡಿದ್ದು, ಅವರಿಗೆ ಶಾಸ್ವತ ಪರಿಹಾರವಾಗಿ ಬೇರೆಡೆ ಸ್ಥಳಾಂತರಿಸಲು ಸೂಕ್ತ ಜಾಗ ನೀಡಬೇಕು. ಜತೆಗೆ ಇದಕ್ಕೊಂದು ಸಮಿತಿ ಮಾಡುವಂತೆ ಮನವಿ ಮಾಡಿಕೊಂಡರು.

ಜಿಲ್ಲೆಯಲ್ಲಿ ಅತಿ ಹೆಚ್ಚು ರಸ್ತೆ, ಸೇತುವೆ ಹಾಗೂ ಸಣ್ಣ ನೀರಾವರಿ ಇಲಾಖೆಯ ಯೋಜನೆಗಳಿಗೆ ಹಾನಿಯಾಗಿರುವುದರಿಂದ ಇಲ್ಲಿಗೆ ವಿಶೇಷ ಪ್ಯಾಕೇಜ್ ನೀಡಲು ಸರ್ಕಾರ ಮಟ್ಟದಲ್ಲಿ ಪ್ರಯತ್ನಿಸಿದರೆ ಜನರ ನಿರೀಕ್ಷೆಗೆ ಸ್ಪಂದಿಸಲು ಸಾಧ್ಯವಿದೆ. ಜತೆಗೆ ಜಿಲ್ಲೆಯಲ್ಲಿ ನೆರೆಯಿಂದಾಗಿ 600 ಕೋಟಿಗೂ ಅಧಿಕ ಹಾನಿ ಸಂಭವಿಸಿದ್ದು, ಇದುವರೆಗೂ ಸರ್ಕಾರದಿಂದ ಯಾವುದೇ ನೆರವು ಲಭ್ಯವಾಗಿಲ್ಲ. ಈ ನಿಟ್ಟಿನಲ್ಲಿ ನೆರೆಯಿಂದ ತೊಂದರೆಗೊಳಗಾದ ಕುಟುಂಬಗಳಿಗೆ ಪರಿಹಾರ ಒದಗಿಸುವುದರ ಜೊತೆಗೆ ರಸ್ತೆ, ಸೇತುವೆಯಂತಹ ತುರ್ತು ಪರಿಹಾರ ಕಾಮಗಾರಿಗಳಿಗೆ ಸರ್ಕಾರದಿಂದ ಶೀಘ್ರದಲ್ಲಿ ಹಣ ಬಿಡುಗಡೆಗೊಳಿಸುವಂತೆ ಜಿಲ್ಲಾಧಿಕಾರಿ, ಸಚಿವರ ಬಳಿ ಮನವಿ ಮಾಡಿದರು.

ಬಳಿಕ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ, ಜಿಲ್ಲೆಯಲ್ಲಿ ನೆರೆಯಿಂದ ಅತಿ ಹೆಚ್ಚು ಹಾನಿಯಾಗಿರುವುದು ಗಮನಕ್ಕೆ ಬಂದಿದೆ. ರಸ್ತೆ, ಸೇತುವೆ, ಪರಿಹಾರ ವಿತರಣೆ ಕ್ರಮಗಳ ಬಗ್ಗೆ ಸಿಎಂ ಯಡಿಯೂರಪ್ಪ ಅವರ ಗಮನಕ್ಕೆ ತರಲಾಗುವುದು. ಅಲ್ಲದೆ ಈಗಾಗಲೇ ರಾಜ್ಯ ಸರ್ಕಾರ ಜಿಲ್ಲೆಗೆ ಮೂಲಭೂತ ಸೌಕರ್ಯ ಒದಗಿಸಲು 25 ಕೋಟಿ ರೂ. ನೀಡಿದ್ದು, ಅದನ್ನು ಸಮರ್ಪಕವಾಗಿ ಬಳಸಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

ABOUT THE AUTHOR

...view details