ಕಾರವಾರ: ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಅವರ ರಾಜಕೀಯ ಗುರು ಸತತ 9ನೇ ಬಾರಿಗೆ ಗ್ರಾಪಂಗೆ ಎಂಟ್ರಿ ನೀಡಿದ್ದಾರೆ.
9ನೇ ಬಾರಿ ಗ್ರಾಪಂಗೆ ಎಂಟ್ರಿ ಕೊಟ್ಟ ಸಚಿವ ಶಿವರಾಮ್ ಹೆಬ್ಬಾರ್ ರಾಜಕೀಯ ಗುರು
ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅವರ ರಾಜಕೀಯ ಗುರು ಶ್ರೀಕಾಂತ ಶೆಟ್ಟಿ ಸತತ 9ನೇ ಬಾರಿ ಗ್ರಾಪಂ ಚುನಾವಣೆಯಲ್ಲಿ ಜಯ ಗಳಿಸಿದ್ದಾರೆ.
ಸಚಿವ ಶಿವರಾಮ್ ಹೆಬ್ಬಾರ್ ರಾಜಕೀಯ ಗುರುಗೆ ಜಯ
ಯಲ್ಲಾಪುರ ತಾಲೂಕಿನ ಇಡಗುಂದಿ ಗ್ರಾಪಂ ಗುಳ್ಳಾಪುರ ವಾರ್ಡ್ ಅಭ್ಯರ್ಥಿಯಾಗಿದ್ದ ಶ್ರೀಕಾಂತ ಶೆಟ್ಟಿ ಸತತ 9ನೇ ಬಾರಿಗೆ ಆಯ್ಕೆಯಾಗುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ.
ಈ ಹಿಂದೆ 6 ಬಾರಿ ಅವಿರೋಧವಾಗಿ ಆಯ್ಕೆಯಾಗಿದ್ದ ಅವರು, ಈ ಚುನಾವಣೆ ಸೇರಿ ಮೂರು ಬಾರಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಈ ಹಿಂದೆ ಅರಬೈಲ್ ಹಾಗೂ ಇಡಗುಂದಿ ಗ್ರಾಪಂ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಶ್ರೀಕಾಂತ ಶೆಟ್ಟಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅವರ ರಾಜಕೀಯ ಗುರುವಾಗಿದ್ದಾರೆ. ಈ ಬಗ್ಗೆ ಸ್ವತಃ ಶಿವರಾಮ್ ಹೆಬ್ಬಾರ್ ಹಲವು ಬಾರಿ ಹೇಳಿಕೊಂಡಿದ್ದಾರೆ.