ಶಿರಸಿ: ಲವ್ ಜಿಹಾದ್ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಇಂತಹ ಕೇಸ್ಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲವ್ ಜಿಹಾದ್ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತದೆ. ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಮತಾಂತರ ನಿಷೇಧ ಕಾಯ್ದೆ ಮಸೂದೆ ಈ ಅಧಿವೇಶನದಲ್ಲಿ ಆಗಲ್ಲ ಎಂದು ಗೃಹ ಸಚಿವರೇ ಹೇಳಿದ್ದಾರೆ. ಆದರೆ, ಗೋಹತ್ಯೆ ನಿಷೇಧ ಮಸೂದೆ ನಮ್ಮ ರಾಜ್ಯವೂ ಸೇರಿದಂತೆ ಅನೇಕ ಕಡೆ ಜಾರಿಯಲ್ಲಿದೆ. ಆದರೂ ಗೋಹತ್ಯೆ ಪ್ರಕರಣಗಳು ವರದಿಯಾಗುತ್ತಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು.