ಕಾರವಾರ (ಉ.ಕ):ಸಿಎಂ ಕುರ್ಚಿ ಖಾಲಿ ಇಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇನ್ನೂ 3 ವರ್ಷಗಳ ಕಾಲ ಸರ್ಕಾರ ಚೆನ್ನಾಗಿ ನಡೆಯಲಿದೆ ಎಂದು ಸಕ್ಕರೆ ಮತ್ತು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.
ಕಾರವಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕ ಯತ್ನಾಳ್ ಹೇಳಿಕೆಗೆ ಈಗಾಗಲೇ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ. ಅದು ಅವರ ವೈಯಕ್ತಿಕ ಹೇಳಿಕೆ. ಯಡಿಯೂರಪ್ಪ ಅವರ ಆಡಳಿತ ಇನ್ನು 3 ವರ್ಷಗಳ ಕಾಲ ಮುಂದುವರಿಯಲಿದೆ ಎಂದು ಹೇಳಿದರು.
ಸಕ್ಕರೆ ಮತ್ತು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ಸಿದ್ಧತೆ ಮತ್ತು ಹೆಚ್ಚಿನ ಮತದಾನವಾಗುವಂತೆ ನೋಡಿಕೊಳ್ಳಲು ಕರಾವಳಿಯ ತಾಲೂಕುಗಳಲ್ಲಿ ಸಭೆ ನಡೆಸಲಾಗುತ್ತಿದೆ. ಈ ಭಾರಿಯೂ ಬಿಜೆಪಿ ಅಭ್ಯರ್ಥಿ ಸಂಕನೂರ್ ಜಯಗಳಿಸುವ ವಿಶ್ವಾಸವಿದೆ.
ಜೊತೆಗೆ ಆರ್ಆರ್ ನಗರ ಮತ್ತು ಶಿರಾ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳೇ ಜಯಗಳಿಸುತ್ತಾರೆ ಎಂದರು. ಇನ್ನು, ಕೆಲವು ದಿನದಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಕೂಡ ನಡೆಯಲಿದೆ. ಬಹುತೇಕ ತಾಲೂಕಿನಲ್ಲಿ ಬಿಜೆಪಿ ಆಡಳಿತಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.