ಶಿರಸಿ /ಉತ್ತರ ಕನ್ನಡ: ಶಿರಸಿ- ಕುಮಟಾ ರಸ್ತೆಯಲ್ಲಿ ಎರಡು ವರ್ಷ ಸಂಪೂರ್ಣ ಸಂಚಾರ ಬಂದ್ ಮಾಡಿದರೆ ಜನಜೀವನದ ಮೇಲೆ ತುಂಬಾ ದುಷ್ಪರಿಣಾಮ ಬೀರಲಿದ್ದು, ಒಂದು ಬದಿ ರಸ್ತೆ ಮಾಡಿ ಮತ್ತೊಂದು ಬದಿ ಸಂಚಾರಕ್ಕೆ ಅನುವು ಮಾಡಿಕೊಡಲು ಚಿಂತನೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ತಿಳಿಸಿದರು.
ಶಿರಸಿ-ಕುಮಟಾ ರಸ್ತೆ ಸಂಪೂರ್ಣ ಬಂದ್ ಇಲ್ಲ: ಸಚಿವ ಶಿವರಾಂ ಹೆಬ್ಬಾರ್ ಸ್ಪಷ್ಟನೆ - road constuction in uttara kannada
ಶಿರಸಿ-ಕುಮಟಾ ರಸ್ತೆ ಮೇಲ್ದರ್ಜೆಗೇರಿಸುವ ಕಾಮಗಾರಿ ಹಿನ್ನೆಲೆಯಲ್ಲಿ 18 ತಿಂಗಳುಗಳ ಕಾಲ ಸಂಪೂರ್ಣ ಸಂಚಾರ ನಿಷೇಧಿಸಿದರೆ ತೊಂದರೆಯಾಗಲಿದೆ. ಹೀಗಾಗಿ ರಸ್ತೆ ಸಂಪೂರ್ಣ ಬಂದ್ ಮಾಡುವುದಿಲ್ಲ ಎಂದು ಸಚಿವ ಶಿವರಾಂ ಹೆಬ್ಬಾರ್ ತಿಳಿಸಿದ್ದಾರೆ.
ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿರಸಿ-ಕುಮಟಾ ರಸ್ತೆ ಮೇಲ್ದರ್ಜೆಗೇರಿಸುವ ಕಾಮಗಾರಿ ಹಿನ್ನೆಲೆಯಲ್ಲಿ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಿದ್ದಾರೆ. 18 ತಿಂಗಳುಗಳ ಕಾಲ ಸಂಪೂರ್ಣ ಸಂಚಾರ ನಿಷೇಧಿಸಿದರೆ ಘಟ್ಟದ ಮೇಲಿನ ಹಾಗೂ ಕೆಳಗಿನ ತಾಲೂಕಿನ ಜನತೆಗೆ ತೊಂದರೆಯಾಗಲಿದೆ ಎಂದರು.
ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ಪಕ್ಷ ತ್ವರಿತಗತಿಯಲ್ಲಿ ಪ್ರಚಾರ ನಡೆಸುತ್ತಿದೆ. ಚುನಾವಣೆಯನ್ನು ಹಗುರವಾಗಿ ಪರಿಗಣಿಸುತ್ತಿಲ್ಲ. ಈ ಬಾರಿ ಕಳೆದ ಬಾರಿಗಿಂತ ಹೆಚ್ಚು ಅಂತರದಿಂದ ಗೆಲ್ಲುತ್ತೇವೆ, ಎಲ್ಲರೂ ಸೇರಿ ಅಭ್ಯರ್ಥಿಗಳನ್ನು ಗೆಲ್ಲಿಸುತ್ತೇವೆ ಎಂದು ತಿಳಿಸಿದರು.