ಕಾರವಾರ (ಉತ್ತರಕನ್ನಡ): ಕಸ ಎಸೆಯದಂತೆ ಹೇಳಿದ್ದಕ್ಕೆ ಪೌರಕಾರ್ಮಿಕನ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಯುವಕನೊಬ್ಬ ರಸ್ತೆ ಬದಿ ಕಸ ಹಾಕಲು ಮುಂದಾಗಿದ್ದಾನೆ. ಈ ವೇಳೆ ಕಸ ಹಾಕದಂತೆ ತಡೆದ ಪೌರಕಾರ್ಮಿಕನಿಗೆ ಭಯಂಕರವಾಗಿ ಥಳಿಸಲಾಗಿದೆ. ಚೇತನಕುಮಾರ್ ಕೊರಾರ ಹಲ್ಲೆಗೊಳಗಾದ ಪೌರಕಾರ್ಮಿಕ ಆಗಿದ್ದಾನೆ. ಈ ಸಂಬಂಧ ಪೌರಕಾರ್ಮಿಕರು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರತಿಭಟನೆ ಕೂಡಾ ನಡೆಸಿದ್ದಾರೆ.
ಹಲ್ಲೆಗೊಳಗಾದ ಚೇತನ್ ಕುಮಾರ್ ಕಾರವಾರ ನಗರಸಭೆಯಲ್ಲಿ ಪೌರಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾನೆ. ಸೋಮವಾರ ರಾತ್ರಿ ಚೇತನ್ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ದಾರಿಯಲ್ಲಿ ಹೋಗುವ ವೇಳೆ. ಬಸ್ ನಿಲ್ದಾಣದ ಸಮೀಪ ಯುವಕನೊಬ್ಬ ಕಸವನ್ನ ರಸ್ತೆಗೆ ಎಸೆಯಲು ಮುಂದಾಗಿದ್ದಾನೆ. ಆತನನ್ನು ತಡೆದ ಚೇತನ್ ಕಸ ಎಸೆಯದಂತೆ ಬುದ್ದಿಮಾತು ಹೇಳಿದ್ದ. ಇಷ್ಟಕ್ಕೇ ಕೋಪಗೊಂಡ ಯುವಕ, ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ಚೇತನ್ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ, ಜಗಳ ಬಿಡಿಸಲು ಬಂದ ಚೇತನ್ ಸಹೋದರ ಪುರುಷೋತ್ತಮ್ ಮೇಲೂ ಯುವಕರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಆತನನ್ನು ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿರುವ ದೃಶ್ಯಗಳು ಇಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಮೇಲೆ ಪೌರಕಾರ್ಮಿಕರು ದೂರು ನೀಡಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿ ನಗರಸಭೆ ಪೌರಾಯುಕ್ತರಿಗೂ ಮನವಿ ಸಲ್ಲಿಸಿದ್ದಾರೆ.