ಶಿರಸಿ(ಉತ್ತರ ಕನ್ನಡ):ಚುನಾವಣೆ ಘೋಷಣೆಯಾಗುತ್ತಿದ್ದಂತೆ ಶಾಸಕರ ರಾಜೀನಾಮೆ ಪರ್ವ ಮುಂದುವರೆದಿದೆ. ಇಂದು (ಶುಕ್ರವಾರ) ಬೆಳಗ್ಗೆ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಶಿರಸಿಯ ವಿಧಾನ ಸಭಾಧ್ಯಕ್ಷರ ಕಚೇರಿಗೆ ಆಗಮಿಸಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ತಮ್ಕ ರಾಜೀನಾಮೆ ಪತ್ರ ಸಲ್ಲಿಸಿದರು. ಟಿಕೆಟ್ ಕೈತಪ್ಪಿದ ಹಿನ್ನೆಲೆ ರಾಜೀನಾಮೆ ನೀಡಿದ್ದು, ಚುನಾವಣೆಗೆ ಖಂಡಿತ ಸ್ಪರ್ಧೆ ಮಾಡುತ್ತೇನೆ ಎಂದು ತಿಳಿಸಿದರು. ಇವರು ಜೆಡಿಎಸ್ನಿಂದ ಸ್ಪರ್ಧಿಸುವ ಸಾಧ್ಯತೆಯಿದೆ.
ಸಿ.ಟಿ. ರವಿ ಬಿಜೆಪಿಗೆ ಮಾರಕ: ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು "ಮೂರು ಬಾರಿ ಶಾಸಕನಾಗಿರುವ ನನ್ನನ್ನು ಹುಚ್ಚು ನಾಯಿ ಓಡಿಸಿದ ರೀತಿ ಪಕ್ಷದಿಂದ ಓಡಿಸಿದರು. ಇದಕ್ಕೆಲ್ಲ ಸಿ.ಟಿ ರವಿ ಹಾಗೂ ಪ್ರಾಣೇಶ್ ಕಾರಣ. ಹೀನಾಯವಾಗಿ ನನ್ನನ್ನ ನಡೆಸಿಕೊಂಡರು. ಅವರೇ ಜನ ಕಳ್ಸಿ, ಅವ್ರೇ ಜಗಳ ಮಾಡ್ಸಿ ನನ್ನ ಮೇಲೆ ಕೆಟ್ಟ ಅಭಿಪ್ರಾಯ ಬರುವ ರೀತಿ ಮಾಡಿದರು" ಎಂದು ಆರೋಪಿಸಿದರು. ಸಿ.ಟಿ. ರವಿ ಬಿಜೆಪಿಗೆ ಮಾರಕ. ಅವರು ಪಕ್ಷ ಉಳಿಸಲ್ಲ. ನನ್ನ ಬಗ್ಗೆ ಹೇಳಿಲ್ಲ ಅಂತಾ ಹೇಳಿ ಅವರೇ ಆತ್ಮವಿಮರ್ಶೆ ಮಾಡಿಕೊಳ್ಳಲಿ. ಕಾರಣ ಮುಂದಿನ ಬಾರಿ ಜನರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ. ನನಗೆ ಇನ್ನೂ ವಯಸ್ಸಾಗಿಲ್ಲ. ಅನಾರೋಗ್ಯವೂ ಇಲ್ಲ. ಆದರೂ ಟಿಕೆಟ್ ಕೈ ತಪ್ಪಿದೆ. ಆದರೆ ನಾನು ಚುನಾವಣೆಗೆ ಸ್ಪರ್ಧಿಸುತ್ತೇನೆ. ಪಕ್ಷದಿಂದಲೇ ಸ್ಪರ್ಧೆ ಮಾಡುತ್ತೇನೆ. ಇಂತ್ತು ಸಂಜೆ ವೇಳೆಗೆ ತೀರ್ಮಾನ ಮಾಡುತ್ತೇನೆ ಎಂದರು.
ಇದನ್ನೂ ಓದಿ:ಬಿಜೆಪಿಗೆ ಗುಡ್ ಬೈ ಹೇಳಿದ ಮತ್ತೋರ್ವ ಬೆಳಗಾವಿಯ ಮಾಜಿ ಸಚಿವ