ಕಾರವಾರ:ಶ್ರೀ ರಾಮ ನವಮಿ ಅಂಗವಾಗಿ ಹಿಂದೂ ಸಂಘಟನೆಗಳು ಆಯೋಜಿಸಿದ್ದ ಬೈಕ್ ರ‍್ಯಾಲಿಗೆ ಶಾಸಕಿ ರೂಪಾಲಿ ನಾಯ್ಕ ಚಾಲನೆ ನೀಡಿದರು. ಬಳಿಕ ಸ್ವತಃ ತಾವೇ ಸ್ಕೂಟಿ ಓಡಿಸಿಕೊಂಡು ಮೆರವಣಿಗೆಯಲ್ಲಿ ಪಾಲ್ಗೊಂಡರು. ನಗರದ ಮಾಲಾದೇವಿ ಮೈದಾನದಿಂದ ಹಮ್ಮಿಕೊಂಡ ಬೈಕ್ ರ‍್ಯಾಲಿ ಹಾಗೂ ಶೋಭಾ ತಿರಂಗಾ ಯಾತ್ರೆಗೂ ಮೊದಲು ಮಾಲಾದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ನಗರದ ಕೋಡಿಬೀರ ದೇವಸ್ಥಾನದ ಮಾರ್ಗವಾಗಿ, ಸುಭಾಷ್ ವೃತ್ತ, ಗ್ರೀನ್ ಸ್ಟ್ರೀಟ್ ಮೂಲಕ ಕೋಡಿಬಾಗ ಕಾಳಿ ರೀವರ್ ಗಾರ್ಡನ್ ಬಳಿ ಶ್ರೀ ರಾಮಚಂದ್ರ ದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ರ‍್ಯಾಲಿ ಸಂಪನ್ನವಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕಿ ರೂಪಾಲಿ ಎಸ್.ನಾಯ್ಕ, ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಚಾಲನೆ ನೀಡಿರುವುದು ಅತ್ಯಂತ ಶ್ಲಾಘನೀಯ ಕಾರ್ಯವಾಗಿದೆ ಎಂದರು.