ಭಟ್ಕಳ(ಉತ್ತರಕನ್ನಡ): ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ್ ನಾಯ್ಕ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆ ವೈದ್ಯರ ಸಲಹೆ ಮೇರೆಗೆ ಮಣಿಪಾಲದ ಕಸ್ತೂರಬಾ ವೈದ್ಯಕೀಯ ಕಾಲೇಜು (ಕೆಎಂಸಿ) ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಶಾಸಕ ಸುನೀಲ್ ನಾಯ್ಕ ದಾಖಲು - MLA Sunil Naik admitted to KMC Hospital
ಕೊರೊನಾದಿಂದ ಬಳಲುತ್ತಿದ್ದ ಶಾಸಕ ಸುನೀಲ್ ನಾಯ್ಕ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕಸ್ತೂರಬಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ್ ನಾಯ್ಕ
ಕೊರೊನಾ ಸೋಂಕು ದೃಢಪಟ್ಟ ಬಳಿಕ ತಾಲೂಕಿನ ಕೋವಿಡ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ, ತೀವ್ರ ಜ್ವರ, ತಲೆನೋವು ಇದ್ದು, ದೇಹದಲ್ಲಿ ಆಮ್ಲಜನಕದ ಪ್ರಮಾಣ ಕಡಿಮೆಯಾಗಿದೆ. ಕಾರವಾರದಿಂದ ಬಂದಿದ್ದ ವೈದ್ಯರು ಸುನೀಲ್‌ಗೆ ಚಿಕಿತ್ಸೆ ನೀಡುತ್ತಿದ್ದರು.
ಆದರೆ, ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣದ ಹಿನ್ನೆಲೆ ಇಂದು ರಾತ್ರಿ ಅವರನ್ನು ಮಣಿಪಾಲದ ಕಸ್ತೂರಬಾ ವೈದ್ಯಕೀಯ ಕಾಲೇಜು (ಕೆಎಂಸಿ) ಆಸ್ಪತ್ರೆಗೆ ದಾಖಲು ಮಾಡಲಾಗಿದೆ.