ಶಿರಸಿ:ಇಲ್ಲಿನ ಅಭಿವೃದ್ಧಿಯ ಲಾಭವನ್ನು ದೇಶದ್ರೋಹಿಗಳು ಪಡೆದುಕೊಳ್ಳುತ್ತಾರೆ, ಮಂಗಳೂರು ಸಂಪೂರ್ಣ ನಮ್ಮ ಕೈತಪ್ಪಿ ಹೋಗುತ್ತಿದೆ. ಕರಾವಳಿ ಸಂಪೂರ್ಣ ದೇಶದ್ರೋಹಿಗಳ ಆಡಂಬರವಾಗುತ್ತಿದೆ ಎಂದು ಸಂಸದ ಅನಂತಕುಮಾರ್ ಹೆಗಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಹೇಳಿಕೆ ನೀಡಿದ ಅನಂತಕುಮಾರ್ ಹೆಗಡೆ, ಅಭಿವೃದ್ಧಿಯ ಹೆಸರಿನಲ್ಲಿ ಮಂಗಳೂರಿಗರಿಗೆ ತಲೆನೋವಾಗಿದ್ದು ಮಂಗಳೂರಿನ ಮೂಲ ನಿವಾಸಿಗಳಲ್ಲ, ಕೇರಳದವರು ಎಂದರು. ನಮ್ಮ ಊರಿನ ಅಭಿವೃದ್ಧಿ ಲಾಭವನ್ನು ನಾವೇ ಪಡೆದುಕೊಳ್ಳಬೇಕು ಎಂದರು.