ಶಿರಸಿ:ಕೆನರಾ ಲೋಕಸಭಾ ಕ್ಷೇತ್ರದ ಸಂಸದ ಅನಂತಕುಮಾರ ಹೆಗಡೆಗೆ, ಉರ್ದು ಮಿಶ್ರಿತ ಭಾಷೆಯಲ್ಲಿ ಅನಾಮದೇಯ ವ್ಯಕ್ತಿ ಜೀವ ಬೆದರಿಕೆ ಕರೆ ಹಾಕಿರುವ ಕುರಿತು ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಸದ ಅನಂತಕುಮಾರಗೆ ಅನಾಮಧೇಯ ವ್ಯಕ್ತಿಯಿಂದ ಜೀವ ಬೆದರಿಕೆ ಕರೆ: ದೂರು ದಾಖಲು - ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆ
ಕಳೆದ 2020 ರ ಏಪ್ರಿಲ್ 20 ರಂದೂ ಸಹ ಇದೇ ಮಾದರಿಯಲ್ಲಿ ಕರೆ ಮಾಡಿ ಬೆದರಿಕೆ ಹಾಕಿದ್ದ ಎಂದು ತಿಳಿಸಲಾಗಿದೆ. ಅಲ್ಲದೇ ಈ ಹಿಂದೆಯೂ ಅನೇಕ ಬಾರಿ ಸಂಸದರಿಗೆ ಬೆದರಿಕೆ ಕರೆ ಬಂದಿರುವ ಕುರಿತು ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
mp anath kumar
ಹಿಂದಿನ ಬಾರಿ ಕರೆ ಮಾಡಿದಾಗ ದೂರು ನೀಡಿದ್ದೀಯ, ಪತ್ರಿಕೆಯಲ್ಲೂ ಸುದ್ದಿಯಾಗಿತ್ತು. ನಿನ್ನನ್ನು ಏನು ಮಾಡುತ್ತೀನಿ ನೋಡು, ಸುಮ್ಮನೆ ಬಿಡುವುದಿಲ್ಲ ಎಂದು ಅನಾಮದೇಯ ವ್ಯಕ್ತಿ ಬೆದರಿಕೆ ಹಾಕಿದ್ದಾಗಿ ಸಂಸದರ ಆಪ್ತ ಕಾರ್ಯದರ್ಶಿ ಸುರೇಶ್ ಶಟ್ಟಿ ಅವರಿಂದ ಶಿರಸಿ ಮಾರುಕಟ್ಟೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಳೆದ 2020 ರ ಏಪ್ರಿಲ್ 20 ರಂದೂ ಸಹ ಇದೇ ಮಾದರಿಯಲ್ಲಿ ಕರೆ ಮಾಡಿ ಬೆದರಿಕೆ ಹಾಕಿದ್ದ ಎಂದು ತಿಳಿಸಲಾಗಿದೆ. ಅಲ್ಲದೇ ಈ ಹಿಂದೆಯೂ ಅನೇಕ ಬಾರಿ ಸಂಸದರಿಗೆ ಬೆದರಿಕೆ ಕರೆ ಬಂದಿರುವ ಕುರಿತು ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.