ಶಿರಸಿ:ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ರಾಷ್ಟ್ರೀಯ ಸೇನಾ ಅಕಾಡೆಮಿ ಕ್ರೀಡಾ ಇಲಾಖೆ ವತಿಯಿಂದ ಜಾವಲಿನ್ ಕೋಚ್ ಕಾಶಿನಾಥ್ ನಾಯ್ಕ್ ಅವರನ್ನು ಸನ್ಮಾನಿಸಲಾಯಿತು.
ಜಾವೆಲಿನ್ ಕೋಚ್ ಕಾಶಿನಾಥ್ ನಾಯ್ಕ್ ಅವರಿಗೆ ಸನ್ಮಾನ ನಗರದ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಕಾಶಿನಾಥ್ ನಾಯ್ಕ್ ಅವರನ್ನು ಸನ್ಮಾನಿಸಿದರು.
'ಸೇನೆಯಿಂದ ನಿವೃತ್ತಿಯಾದ ಬಳಿಕ ಶಿರಸಿಯಲ್ಲಿ ಕ್ರೀಡಾ ಅಕಾಡೆಮಿ ಸ್ಥಾಪಿಸುವ ಗುರಿ ಇದೆ. ಖೇಲೊ ಇಂಡಿಯಾ ಸೇರಿದಂತೆ ಕ್ರೀಡೆಗೆ ಸಂಬಂಧಿಸಿದ ಸೌಲಭ್ಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕಿದೆ. ವಿದೇಶಿ ಕೋಚ್ಗಳಿಗೆ ಸಿಕ್ಕ ಪ್ರೋತ್ಸಾಹ ಸ್ವದೇಶಿ ಕೋಚ್ಗಳಿಗೆ ಮೊದಲು ಸಿಗುತ್ತಿರಲಿಲ್ಲ ಎಂಬ ಬೇಸರವಿತ್ತು. ಈಗ ಬೆಂಬಲ ಸಿಗುವ ಭರವಸೆ ಮೂಡಿದೆ' ಎಂದು ಕಾಶೀನಾಥ್ ಹೇಳಿದರು.
ಇದನ್ನೂಓದಿ: ₹21 ಕೋಟಿ ಮೌಲ್ಯದ 3,400 ಕೆಜಿ ಹೈಟೆಕ್ ಗಾಂಜಾ ಜಪ್ತಿ: ಎನ್ಸಿಬಿ ಇತಿಹಾಸದಲ್ಲೇ ದೊಡ್ಡ ಕಾರ್ಯಾಚರಣೆ