ಕಾರವಾರ: ಸಚಿವ ಸಂಪುಟ ವಿಸ್ತರಣೆ ವಿಳಂಬಮಾಡುತ್ತಿರುವುದರಿಂದ ರಾಜ್ಯದಲ್ಲಿ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು.
ಸಚಿವ ಸಂಪುಟವಿಲ್ಲದೇ ಅಭಿವೃದ್ಧಿ ಕುಂಠಿತವಾಗಿದೆ: ಆರ್.ವಿ. ದೇಶಪಾಂಡೆ - ಮಾಜಿ ಸಚಿವ ಆರ್.ವಿ. ದೇಶಪಾಂಡೆ ನ್ಯೂಸ್
ಸಚಿವ ಸಂಪುಟ ವಿಸ್ತರಣೆ ವಿಳಂಬಮಾಡುತ್ತಿರುವುದರಿಂದ ರಾಜ್ಯದಲ್ಲಿ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು.
ಆರ್.ವಿ. ದೇಶಪಾಂಡೆ
ಅಂಕೋಲಾದಲ್ಲಿ ಈ ಸಂಬಂಧ ಮಾತನಾಡಿದ ದೇಶಪಾಂಡೆ, ಹಲವು ತಿಂಗಳಿನಿಂದ ಸಚಿವರೇ ಇಲ್ಲದೆ ಅಭಿವೃದ್ದಿ ಕುಂಠಿತವಾಗಿದೆ. ಇನ್ನಾದರೂ ಸಚಿವ ಸಂಪುಟ ವಿಸ್ತರಣೆ ಮಾಡಲಿ, ಇದರಿಂದ ಅಭಿವೃದ್ಧಿಯಾಗುತ್ತದೆ ಎಂದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಶೀಘ್ರದಲ್ಲಿಯೇ ನೇಮಕ ಮಾಡಲಾಗುವುದು. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ, ನನಗೂ ಕೆಪಿಸಿಸಿ ಅಧ್ಯಕ್ಷರಾಗುತ್ತೀರಾ ಎಂದು ಮಧುಸೂದನ್ ಮಿಸ್ತ್ರಿಯವರು ಕೇಳಿದ್ದರು. ಆದರೆ ಈಗಾಗಲೇ ಒಂದು ಭಾರಿ ಅಧ್ಯಕ್ಷನಾಗಿರುವ ಕಾರಣ, ನಾನು ಒಪ್ಪಲಿಲ್ಲ. ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಸಂಬಂಧ ಚೆನ್ನಾಗಿಯೇ ಇದೆ. ಶೀಘ್ರದಲ್ಲಿ ಅಧ್ಯಕ್ಷರನ್ನು ನೇಮಕ ಮಾಡುತ್ತಾರೆ ಎಂದು ಹೇಳಿದರು.