ಭಟ್ಕಳ:ದೇಶದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಮಂಗಳೂರು ಸಮೀಪದ ಭಟ್ಕಳ ಮೂಲದ ವ್ಯಕ್ತಿಗೆ ಕೊರೊನಾ ಸೊಂಕು ಪತ್ತೆಯಾಗಿದೆ. ಈ ಹಿನ್ನೆಯಲ್ಲಿ ನಿನ್ನೆ ಸಂಜೆ ತಹಶೀಲ್ದಾರ್ ಕಚೇರಿಯಲ್ಲಿ ತಾಲೂಕಾಡಳಿತ ಸುದ್ದಿಗೋಷ್ಠಿ ನಡೆಸಿತು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಹಾಯಕ ಆಯುಕ್ತ ಭರತ್ ಸೆಲ್ವಂ, ಕೊರೊನಾ ಸೋಂಕಿತ ವ್ಯಕ್ತಿ ಭಟ್ಕಳ ಮೂಲದವರಾಗಿದ್ದು, ಮಾ.19ರಂದು ದುಬೈನಿಂದ ಆಗಮಿಸಿದ್ದಾರೆ. ಅವರನ್ನು ವಿಮಾನ ನಿಲ್ದಾಣದಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. ಬಳಿಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವ್ಯಕ್ತಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಆದರೆ, ಸೋಂಕಿತ ವ್ಯಕ್ತಿ ಭಟ್ಕಳಕ್ಕೆ ಬಂದಿಲ್ಲ. ಆತನನ್ನು ವಿಮಾನ ನಿಲ್ದಾಣದಿಂದ ನೇರವಾಗಿ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಿಸವಾಗಿದೆ. ಭಟ್ಕಳದ ಜನತೆ ಭಯಪಡಬೇಕಾದ ಅವಶ್ಯಕತೆ ಇಲ್ಲ ಎಂದರು.