ಶಿರಸಿ:ಚುನಾವಣೆಗೆ ನಿಲ್ಲಲು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ನೂರಕ್ಕೆ ನೂರರಷ್ಟು ನ್ಯಾಯಾಲಯ ಅವಕಾಶ ಮಾಡಿಕೊಡುತ್ತದೆ ಎನ್ನುವ ನಂಬಿಕೆಯಿದೆ ಎಂದು ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಮ್ಮನ್ನು ಚುನಾವಣೆಗೆ ನಿಲ್ಲದಂತೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಶಿವರಾಮ್ ಹೆಬ್ಬಾರ್ - ತಮಿಳುನಾಡಿನ ಪಿ. ದಿನಕರನ್ ಕೇಸ್
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್, ಚುನಾವಣೆಗೆ ನಿಲ್ಲದಂತೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ನೂರಕ್ಕೆ ನೂರರಷ್ಟು ನ್ಯಾಯಾಲಯ ಅವಕಾಶ ಮಾಡಿಕೊಡುತ್ತದೆ ಎನ್ನುವ ನಂಬಿಕೆಯಿದೆ ಎಂದರು.
ಶಿವರಾಮ್ ಹೆಬ್ಬಾರ್
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 30ನೇ ತಾರೀಖು ನಾಮಪತ್ರ ಸಲ್ಲಿಸಲು ಕೊನೆ ದಿನ. ನಮಗೆ ರಾಜಕೀಯ ನಿರ್ಣಯ ಕೈಗೊಳ್ಳಲೂ ಕೊನೆ ದಿನವಾಗಿದೆ ಎಂದರು.
ಅನರ್ಹತೆ ಆಗುವುದಕ್ಕೂ ಚುನಾವಣೆಗೆ ನಿಲ್ಲುವುದಕ್ಕೂ ಯಾವುದೇ ಸಂಬಂಧವಿಲ್ಲ. ಅನರ್ಹತೆ ಆ ದಿನಕ್ಕೆ ಅಷ್ಟೇ. ತಮಿಳುನಾಡಿನ ಪಿ. ದಿನಕರನ್ ಕೇಸ್ನಲ್ಲಿ 19 ಜನರಿಗೆ ಇದೇ ನಿರ್ಣಯ ಕೊಡಲಾಗಿದೆ ಎಂದರು.