ಕಾರವಾರ: ವಿವಿಧ ಸಂಘಟನೆಗಳು ನೀಡಿರುವ ಬಂದ್ ಕರೆಗೆ ಯಾವುದೇ ಅನುಮತಿ ಪಡೆದಿಲ್ಲ. ಹಾಗಾಗಿ ಜಿಲ್ಲೆಯಾದ್ಯಂತ ಯಾವುದೇ ರೀತಿಯ ಬಂದ್ ಇಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಸ್ಪಷ್ಟಪಡಿಸಿದ್ದಾರೆ.
ಬಂದ್ಗೆ ಅನುಮತಿ ನೀಡಿಲ್ಲ: ಉ.ಕ ಎಸ್ಪಿ ಶಿವಪ್ರಕಾಶ್ - ಭಾರತ್ ಬಂದ್ಗೆ ಉತ್ತರ ಕನ್ನಡ ಎಸ್ಪಿ ಪ್ರತಿಕ್ರಿಯೆ
ವಿವಿಧ ಸಂಘಟನೆಗಳು ನೀಡಿರುವ ಬಂದ್ ಕರೆಗೆ ಯಾವುದೇ ಅನುಮತಿ ಪಡೆದಿಲ್ಲ. ಹಾಗಾಗಿ ಜಿಲ್ಲೆಯಾದ್ಯಂತ ಯಾವುದೇ ರೀತಿಯ ಬಂದ್ ಇಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಸ್ಪಷ್ಟಪಡಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು
ಆಶಾ ಕಾರ್ಯಕರ್ತೆಯರು ಭಟ್ಕಳ, ಹೊನ್ನಾವರ, ಶಿರಸಿ, ಕಾರವಾರ ಹಾಗೂ ಹಳಿಯಾಳದಲ್ಲಿ ಮೆರವಣಿಗೆ, ಧರಣಿ ನಡೆಸಲು ಅನುಮತಿ ಪಡೆದುಕೊಂಡಿದ್ದಾರೆ. ಸಿಐಟಿಯು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಎಸ್ಎನ್ಎಲ್ ಹಾಗೂ ಕೆಲವು ಕೇಂದ್ರ ಸರ್ಕಾರಿ ನೌಕರರ ಸಂಘಗಳು ಆಯಾ ತಾಲೂಕುಗಳಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮೆರವಣಿಗೆ ಮೂಲಕ ತೆರಳಿ ಮನವಿ ಸಲ್ಲಿಸಲಿದ್ದಾರೆ. ಈಗಾಗಲೇ ಕೆಎಸ್ಆರ್‌ಟಿಸಿ ಸಿಬ್ಬಂದಿಗೂ ಸ್ಪಷ್ಟನೆ ಕೇಳಿದ್ದು, ಇದುವರೆಗೆ ಮುಷ್ಕರಕ್ಕೆ ಬೆಂಬಲ ನೀಡುವ ಕುರಿತು ಮಾಹಿತಿ ನೀಡಿಲ್ಲ ಎಂದು ತಿಳಿಸಿದರು.