ಕಾರವಾರ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಗೆ ಕಾರವಾರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ತ್ವರಿತ ವಿಚಾರಣೆಯ ವಿಶೇಷ ನ್ಯಾಯಾಲಯ 20 ವರ್ಷ ಜೈಲು ಹಾಗೂ 1. 20 ಲಕ್ಷ ರೂ ದಂಡ ವಿಧಿಸಿದೆ.
ಕಾರವಾರ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ, ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ - ಶಿವಾನಂದ ಗೌಳೇರ
ಬಾಲಕಿಯನ್ನು ಮನೆ ಹಾಗೂ ಹೊಲಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದ ಅಪರಾಧಿಗೆ ಕಾರವಾರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಮುಂಡಗೋಡದ ಓರಲಗಿಯ ಶಿವಾನಂದ ಗೌಳೇರ (60 ವರ್ಷ) ಶಿಕ್ಷೆಗೊಳಗಾದ ಅಪರಾಧಿ. ಈತ ಬಾಲಕಿಯನ್ನು ಮನೆೆ ಹಾಗೂ ಹೊಲಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಬಗ್ಗೆ ಸೆ. 16- 2021ರಲ್ಲಿ ಪೋಕ್ಸೊ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಸಿಪಿಐ ಸಿದ್ದಪ್ಪ ಸಿಮಾನಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಅದರಂತೆ ಸುದೀರ್ಘ ವಿಚಾರಣೆ ಬಳಿಕ ನ್ಯಾಯಾಧೀಶರಾದ ಶಿವಾಜಿ ನಲವಾಡೆ ಅವರು ಅಪರಾಧಿಗೆ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಸಂತ್ರಸ್ತೆ ಪರವಾಗಿ ಸರ್ಕಾರಿ ಅಭಿಯೋಜಕ ಶುಭಾ.ಆರ್ ಗಾಂವಕರ್ ವಾದಿಸಿದ್ದರು.
ಇದನ್ನೂ ಓದಿ:ರಾಜ್ಯದಲ್ಲೂ ಸ್ಕ್ರ್ಯಾಪ್ ನೀತಿ ಜಾರಿ: 15 ವರ್ಷಕ್ಕಿಂತ ಹಳೆಯ ವಾಹನಗಳಿನ್ನು ಗುಜರಿಗೆ