ಕರ್ನಾಟಕ

karnataka

ETV Bharat / state

ಬೆಂಗಳೂರಿನಿಂದ ಬಂದ ವ್ಯಕ್ತಿಗೆ ಕೊರೊನಾ: ಶಿರಸಿಯಲ್ಲಿ 6 ಮನೆ, 2 ಆಸ್ಪತ್ರೆ ಸೀಲ್‌ಡೌನ್‌ - ಕೊರೊನಾ ಪ್ರಕರಣಗಳು

ಸಿಲಿಕಾನ್ ಸಿಟಿ ಬೆಂಗಳೂರಿನಿಂದ ಶಿರಸಿಗೆ ವಾಪಸ್ಸಾಗಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದ್ದು, 6 ಮನೆಗಳು ಹಾಗೂ ಎರಡು ಖಾಸಗಿ ಆಸ್ಪತ್ರೆಗಳನ್ನು ಸೀಲ್​ ಡೌನ್ ಮಾಡಲಾಗಿದೆ.

one-corona-cases-found-in-sirasi
ಶಿರಸಿ ಕೊರೊನಾ ಪತ್ತೆ

By

Published : Jul 3, 2020, 5:08 PM IST

ಶಿರಸಿ (ಉತ್ತರ ಕನ್ನಡ):ಬೆಂಗಳೂರಿನಿಂದ ವಾಪಸ್ಸಾಗಿದ್ದ ಶಿರಸಿಯ ವ್ಯಕ್ತಿಯೋರ್ವನಿಗೆ ಕೊರೊನಾ ದೃಢಪಟ್ಟಿದ್ದು ಇಲ್ಲಿನ ಮರಾಠಿಕೊಪ್ಪದ 6 ಮನೆಗಳು ಹಾಗೂ ಎರಡು ಖಾಸಗಿ ಆಸ್ಪತ್ರೆಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ಸೀಲ್ ಡೌನ್ ಮಾಡಲಾಗಿದೆ.
ಜೂನ್ 23 ರಂದು ಬೆಂಗಳೂರಿಗೆ ಹೋಗಿದ್ದ ವ್ಯಕ್ತಿ ಜೂ. 24 ರಂದು ಶಿರಸಿಗೆ ವಾಪಸ್ಸಾಗಿದ್ದ. ನಂತರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜೂ.26 ರಂದು ಸ್ಥಳೀಯ ಖಾಸಗಿ ಆಸ್ಪತ್ರೆಯ ವೈದ್ಯರನ್ನು ಸಂಪರ್ಕಿಸಿದ್ದಾನೆ. ಇಲ್ಲಿ ಚಿಕಿತ್ಸೆ ನೀಡಿದ್ದ ವೈದ್ಯರು ವಿಚಾರವನ್ನು ತಾಲೂಕು ಆಡಳಿತದ ಗಮನಕ್ಕೆ ತಂದಿದ್ದರು.

ಬೆಂಗಳೂರಿನಿಂದ ಶಿರಸಿಗೆ ಬಂದ ವ್ಯಕ್ತಿಗೆ ಕೊರೊನಾ
ಜ್ವರದ ಹಿನ್ನೆಲೆಯಲ್ಲಿ ವ್ಯಕ್ತಿಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಸದ್ಯ ಪರೀಕ್ಷಾ ವರದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಹೋಮ್ ಕ್ವಾರಂಟೈನ್​ನಲ್ಲಿದ್ದ ವ್ಯಕ್ತಿಯನ್ನು ಕಾರವಾರಕ್ಕೆ ಕರೆದೊಯ್ಯಲಾಗಿದೆ.

ABOUT THE AUTHOR

...view details