ಕಾರವಾರ: ಭಾರೀ ಮಳೆ ಹಿನ್ನೆಲೆ ನಿಯಂತ್ರಣ ತಪ್ಪಿದ ಬೈಕ್ವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕಾರವಾರದ ಲಂಡನ್ ಸೇತುವೆ ಬಳಿ ನಡೆದಿದೆ.
ಆನಂದ್ (25) ಸ್ಥಳದಲ್ಲೇ ಮೃತಪಟ್ಟಿರುವ ಬೈಕ್ ಸವಾರ. ಕೇದಾರನಾಥ (26) ಗಂಭೀರವಾಗಿ ಗಾಯಗೊಂಡ ಹಿಂಬದಿ ಸವಾರ. ಈತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ.