ಕಾರವಾರ:ಉಸ್ತುವಾರಿ ಸಚಿವರ ಸಭೆಗೆ ಆಗಮಿಸುತ್ತಿದ್ದ ಅಧಿಕಾರಿಗಳ ಕಾರು ಪಲ್ಟಿಯಾಗಿ ಓರ್ವ ಇಂಜಿನಿಯರ್ ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ಇಂದು ನಡೆದಿದೆ. ಸಿದ್ದಾಪುರ ಲೋಕೋಪಯೋಗಿ ಇಲಾಖೆ ಎಇಇ ಆಗಿದ್ದ ಮುದುಕಣ್ಣನವರ್ (58) ಮೃತಪಟ್ಟ ಅಧಿಕಾರಿ.
ಸಚಿವರ ಸಭೆಗೆ ಆಗಮಿಸುತ್ತಿದ್ದ ಅಧಿಕಾರಿಗಳ ಕಾರು ಪಲ್ಟಿ: ಓರ್ವ ಸಾವು, ನಾಲ್ವರಿಗೆ ಗಂಭೀರ ಗಾಯ! - Ankola Accident news
ಕಾರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಚಿವ ಶಿವರಾಮ್ ಹೆಬ್ಬಾರ್ ನೇತೃತ್ವದಲ್ಲಿ ನಡೆಯುವ ನೆರೆ ಹಾಗೂ ಕೊರೊನಾ ಸಂಬಂಧದ ಸಭೆಗೆ ಜಿಲ್ಲಾಮಟ್ಟದ ಅಧಿಕಾರಿಗಳನ್ನು ಕರೆಯಲಾಗಿತ್ತು. ಈ ವೇಳೆ ಅಪಘಾತ ಸಂಭವಿಸಿದೆ.
ಕಾರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಚಿವ ಶಿವರಾಮ್ ಹೆಬ್ಬಾರ್ ನೇತೃತ್ವದಲ್ಲಿ ನಡೆಯುವ ನೆರೆ ಹಾಗೂ ಕೊರೊನಾ ಸಂಬಂದದ ಸಭೆಗೆ ಜಿಲ್ಲಾಮಟ್ಟದ ಅಧಿಕಾರಿಗಳನ್ನು ಕರೆಯಲಾಗಿತ್ತು. ಸಭೆಗೆ ಲೋಕೋಪಯೋಗಿ ಇಲಾಖೆಯ ಘಟ್ಟದ ಮೇಲ್ಭಾಗದ ಶಿರಸಿ, ಸಿದ್ದಾಪುರ ಹಾಗೂ ಮುಂಡಗೋಡ ತಾಲೂಕಿನ ಇಂಜಿನಿಯರ್ ಒಂದೇ ಕಾರಿನಲ್ಲಿ ಬರುತ್ತಿದ್ದರು.
ಆದರೆ ಬಾಳೆಗುಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಅನಾಹುತ ಸಂಭವಿಸಿದ್ದು ಮುದುಕಣ್ಣನವರ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡವರನ್ನು ತಕ್ಷಣ ಕಾರವಾರ ಕ್ರಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಅಂಕೋಲಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.