ಕಾರವಾರ:ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೊಂದು ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ ನೂರಕ್ಕೆ ತಲುಪಿದೆ.
ಉತ್ತರ ಕನ್ನಡದಲ್ಲಿ ಮತ್ತೊರ್ವನಿಗೆ ಕೊರೊನಾ...100ಕ್ಕೇರಿದ ಸೋಂಕಿತರ ಸಂಖ್ಯೆ - Karawara news
ಮಹಾರಾಷ್ಟ್ರದಿಂದ ವಾಪಸ್ಸಾದ 56 ವರ್ಷದ ಕುಮಟಾ ಮೂಲದ ವ್ಯಕ್ತಿಯಲ್ಲಿ ಇಂದು ಕೊರೊನಾ ಸೋಂಕು ಪತ್ತೆಯಾಗಿದೆ.
![ಉತ್ತರ ಕನ್ನಡದಲ್ಲಿ ಮತ್ತೊರ್ವನಿಗೆ ಕೊರೊನಾ...100ಕ್ಕೇರಿದ ಸೋಂಕಿತರ ಸಂಖ್ಯೆ Covid 19 Hospital](https://etvbharatimages.akamaized.net/etvbharat/prod-images/768-512-07:29-kn-kwr-04-100-corona-case-7202800-12062020192339-1206f-1591970019-553.jpeg)
ಮಹಾರಾಷ್ಟ್ರದಿಂದ ವಾಪಸ್ಸಾದ 56 ವರ್ಷದ ಕುಮಟಾ ಮೂಲದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆದರೆ ಹೆಲ್ತ್ ಬುಲೆಟಿನ್‌ನಲ್ಲಿ ನಾಲ್ಕು ಪ್ರಕರಣ ಎಂದು ತಪ್ಪಾಗಿ ನಮೂದು ಮಾಡಲಾಗಿದೆ. ಈ ಬಗ್ಗೆ ಜಿಲ್ಲಾಡಳಿತ ಸ್ಪಷ್ಟನೆ ನೀಡಿದ್ದು, ನಿನ್ನೆಯ ಮೂರು ಪ್ರಕರಣಗಳನ್ನು ಮತ್ತೆ ಹೆಲ್ತ್ ಬುಲೆಟಿನ್‌ನಲ್ಲಿ ಸೇರಿಸಲಾಗಿದೆ. ಆದರೆ ಇಂದು ಕುಮಟಾದಲ್ಲಿ ಮಾತ್ರ ಓರ್ವರಿಗೆ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು ಪತ್ತೆಯಾದ ಸೋಂಕಿತರ ಸಂಖ್ಯೆ 100ಕ್ಕೆ ಏರಿಕೆಯಾಗಿದ್ದು, ಅದರಲ್ಲಿ 85 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇನ್ನು 15 ಜನರಿಗೆ ಕಾರವಾರದ ವೈದ್ಯಕೀಯ ಮಹಾವಿದ್ಯಾಲಯದ ಕೋವಿಡ್-19 ವಾರ್ಡ್ನಲ್ಲಿ ಚಿಕಿತ್ಸೆ ಮುಂದುವರೆದಿದೆ.