ಕಾರವಾರ: ಕಾರು ಮತ್ತು ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಂಕೋಲಾ ತಾಲೂಕಿನ ಮಾಸ್ತಿಕಟ್ಟಾ ಬಳಿ ಇಂದು ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಅಂಕೋಲಾದಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಗದಗದಿಂದ ಕಾರವಾರಕ್ಕೆ ಆಗಮಿಸುತ್ತಿದ್ದ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಧಾರವಾಡ ಮೂಲದ ಐವರ ಪೈಕಿ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.